Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು

*ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

June 29, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನವದೆಹಲಿ/ಬೆಂಗಳೂರು ಜೂ.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತು ಚರ್ಚೆ ನಡೆಸಿದರು.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ರಾಜ್ಯದ ಪರವಾಗಿ ಮಂಡಿಸಲಾದ ಪ್ರಮುಖ ಪ್ರಸ್ತಾವನೆಗಳು ಹೀಗಿವೆ:

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ ಇಂಡಿಯಾ ರಿಸರ್ವ್ ಬೆಟಾಲಿಯನ್ (India Reserve Battalion) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವುದು.

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1,000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.

ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera  ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವುದು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ / ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವುದು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಗಾಂಧಿ ಯುವಕ ಸಂಘದಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ*
Next Article *ಜು.1 ರಂದು ಕಕ್ಕಬ್ಬೆಯಲ್ಲಿ ಸಿಎನ್‍ಸಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.