
ಮಡಿಕೇರಿ ಸೆ.3 NEWS DESK : ಸರ್ವ ದೈವತ ಶಾಲೆಯಲ್ಲಿ ನಡೆದ ಪ್ರೌಢ ಹಾಗೂ ಪ್ರಾಥಮಿಕ ವಿಭಾಗದ ತಾಲ್ಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಢಶಾಲಾ ವಿಭಾಗದ ಪಂದ್ಯಾಟದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಬಿ.ಎಸ್.ಸೃಷ್ಟಿ ಪ್ರಥಮ, ಯು.ಜಿ.ಶ್ರೀವತ್ಸ ದ್ವಿತೀಯ ಹಾಗೂ ಎನ್.ಎಂ.ತರುಣ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಪ್ರಾಥಮಿಕ ವಿಭಾಗದ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾಥಿರ್üಗಳಾದ ಮಾಲೆಟ್ಟಿರ ಚಾಲ್ಸಿ ತೃತೀಯ, ಎಂ.ಎ.ಅಜಾನ್ ಪ್ರಥಮ, ಸಚಿನ್ ಎಸ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಚೆಸ್ ಮಾಸ್ಟರ್ ಶ್ರೀಮಾನ್ ಮಣಿ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೆÇೀಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.








