ಮಡಿಕೇರಿ ಆ.31 : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ನರಿಯಂದಡ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪರಂಬಾಡಿ ನಿವಾಸಿ ಶರ್ಫುದ್ದೀನ್ (27) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನ ಬಳಿ ಇದ್ದ 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜಗದೀಶ್, ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಪಿಎಸ್‌ಐ ಈ.ಮಂಜುನಾಥ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ಕಾರ್ಯ ದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.








