ನಾಪೋಕ್ಲು ಜು.5 : ನಾಪೋಕ್ಲು ಪೊಲೀಸ್ ಠಾಣಾ ಸರಹದ್ದಿನ ಬೇತು ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ ವಿದ್ಯಾನಗರದ ನಿವಾಸಿ ಅರ್.ವಿನೋದ್ ಹಾಗೂ ಬೇತು ಗ್ರಾಮದ ನಿವಾಸಿ ವಿಷ್ಣು ಎಂ.ವಿ ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 230ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಉಪಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ ಉಪ ವಿಭಾಗದ ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. (ವರದಿ : ಝಕ್ರಿಯ ನಾಪೋಕ್ಲು)








