ಮಡಿಕೇರಿ ಜು.13 : ಕುಡಿದ ಅಮಲಿನಲ್ಲಿ ಪುತ್ರನೇ ತಾಯಿಯನ್ನು ಹತ್ಯೆ ಮಾಡಿರುವ ಆರೋಪದಡಿ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಲಿತ (45) ಎಂಬುವವರು ಮೃತ ದುರ್ದೈವಿಯಾಗಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕಟ್ಟೆಪುರ ಹಾಡಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಜೇನುಕುರುಬರ ರಾಜಶೇಖರ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತಾಯಿ, ಮಗನ ನಡುವೆ ಕಲಹ ತಾರಕಕ್ಕೇರಿದಾಗ ಆರೋಪಿ ದೊಣ್ಣೆಯಿಂದ ತಲೆಗೆ ಹೊಡೆದು ಲಲಿತಳನ್ನು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಸ್ಥಳಕ್ಕೆ ಶನಿವಾರಸಂತೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.







