Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮಕ್ಕಳು ಪುಸ್ತಕದ ಕಡೆ ಗಮನಹರಿಸಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮಕ್ಕಳು ಪುಸ್ತಕದ ಕಡೆ ಗಮನಹರಿಸಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

January 29, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

 

ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ 2025-26ನೇ ಸಾಲಿನ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪೌಢಶಾಲಾ ವಿಭಾಗದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜ.24 ರಂದು ಹೆಣ್ಣು ಮಕ್ಕಳ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸಿಗಬೇಕಾದಂತಹ ಗೌರವ, ಪ್ರಾಮುಖ್ಯತೆ ಕೊಡುತ್ತಿರಲಿಲ್ಲ. ಹಾಗಾಗಿ ಇಂತಹ ದಿನಾಚರಣೆ ಮಾಡುವುದರ ಮೂಲಕ ಜನರಿಗೆ ಹೆಣ್ಣು ಮಕ್ಕಳ ಮಹತ್ವ ಮತ್ತು ಪ್ರಾಮುಖ್ಯತೆ ತಿಳಿಯಲಿ ಎಂಬುದಕ್ಕಾಗಿ ಮಹಿಳೆಯರಿಗೆ, ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ದಿನಾಚರಣೆಗಳು ಆಚರಣೆಗೆ ಬಂದಿತು ಎಂದರು. ಹೆಣ್ಣು ಎಂದರೆ ಜವಾಬ್ದಾರಿ, ಹೊರೆ ಎಂಬ ಮನೋಭಾವ ಹಿಂದಿನ ಕಾಲದಿಂದಲೂ ಕೆಲವರ ಮನಸ್ಸಿನಲ್ಲಿ ಬೇರೂರಿದೆ. ಯಾವುದೇ ದಿನಾಚರಣೆ ಮಾಡಿದರೂ, ಎಷ್ಟೇ ಕಾನೂನುಗಳನ್ನು ತಂದರೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕಾಗಿ ಇಂದಿನ ಪ್ರಜೆಗಳೇ ನಾಳಿನ ಭವಿಷ್ಯ ಎನ್ನುವ ಹಾಗೆ, ಪ್ರಪಂಚವನ್ನು ಸಂಪೂರ್ಣವಾಗಿ ಬದಲಾಯಿಸಲು ಸಾಧ್ಯವೇ ಇಲ್ಲ. ಹಾಗಾಗಿ ಮೊದಲು ನಿಮ್ಮನ್ನು ನೀವು ಬದಲಾಯಿಸಿಕೊಳ್ಳಬೇಕು ಎಂದರು. ಪ್ರತಿಯೊಬ್ಬರೂ ತಮ್ಮ ಆಲೋಚನೆ ಬದಲಾಯಿಸಿಕೊಳ್ಳಬೇಕು. ಕೀಳರಿಮೆ ಎಂಬ ಹಿಂಜರಿಕೆಯನ್ನು ಹೋಗಲಾಡಿಸಿ ಎಲ್ಲಾ ಹೆಣ್ಣು ಮಕ್ಕಳು ಧೈರ್ಯದಿಂದ ತಮ್ಮ ಗುರಿ ತಲುಪಲು ಪ್ರಯತ್ನಿಸಬೇಕು ಎಂದು ನುಡಿದರು. ಈಗಿನ ಕಾಲದಲ್ಲಿ ಮಕ್ಕಳು ಕೇವಲ ದೈಹಿಕವಾಗಿಯೂ ಅಲ್ಲದೇ ಮಾನಸಿಕವಾಗಿಯೂ ಅಸುರಕ್ಷಿತರಾಗಿದ್ದಾರೆ. ಮೊಬೈಲ್‍ನಿಂದಾಗಿ ತಮ್ಮ ಸಮಯದ ಜೊತೆಗೆ ಮನಸ್ಸನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಸಮಯ ಓದಲು ಇರುವಂತಹ ಸಮಯ. ಒಮ್ಮೆ ಅವಕಾಶ ತಪ್ಪಿ ಹೋದರೆ, ನಂತರ ಇಂತಹ ಅವಕಾಶ ದೊರೆಯುವುದಿಲ್ಲ. ಸಿಕ್ಕಿದ ಸಮಯವನ್ನು ಚೆನ್ನಾಗಿ ಉಪಯೋಗಿಸಿಕೊಂಡು, ಮೊಬೈಲ್ ದೂರವಿಟ್ಟು, ಪುಸ್ತಕದ ಕಡೆ ಗಮನಹರಿಸಿ, ಮೊಬೈಲ್ ದುರ್ಬಳಕೆಯಿಂದ ತಲೆ ತಗ್ಗಿ ನಡೆಯಬೇಕಾಗಬಹುದು. ಆದರೆ ಪುಸ್ತಕದ ಅರಿವಿನಿಂದ ತಲೆ ಎತ್ತಿ ನಡೆಯಬಹುದು ಎಂದು ತಿಳಿಸಿದರು. ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಅವರು ಮಾತನಾಡಿ, ಈಗ ಇರುವಂತಹ ಸಮಯವನ್ನು ಬಳಸಿಕೊಂಡು ತಮ್ಮ ಉಜ್ವಲವಾದ ಭವಿಷ್ಯ ರೂಪಿಸಿಕೊಳ್ಳಿ. ಓದಿನ ಕಡೆ ಗಮನ ಹರಿಸಿದರೆ ಮುಂದೆ ಉತ್ತಮ ಪ್ರಜೆಗಳಾಗಬಹುದು ಎಂದರು. ವೈಯಕ್ತಿಕವಾಗಿ ಅಥವಾ ಸಾರ್ವಜನಿಕವಾಗಿ ಏನಾದರೂ ಸಮಸ್ಯೆ ಎದುರಾದರೆ ಅಥವಾ ತುರ್ತು ಸಂದರ್ಭಗಳಲ್ಲಿ ಮಕ್ಕಳ ಸಹಾಯವಾಣಿ, ತುರ್ತು ಸಹಾಯವಾಣಿಗಳಿಗೆ ಕರೆ ಮಾಡಿದರೆ ತಕ್ಷಣದ ಸಹಾಯ ದೊರಕಿಸಿಕೊಡುತ್ತೇವೆ. ಇಲಾಖೆ ಮೂಲಕ ಮಕ್ಕಳಿಗಾಗಿ ಅನೇಕ ಸೌಲಭ್ಯಗಳಿದ್ದು, ಅವುಗಳೆಲ್ಲದರ ಸದುಪಯೋಗ ಪಡೆದುಕೊಳ್ಳಿ. ಪ್ರತಿಯೊಂದು ಹೆಣ್ಣು ಕಡ್ಡಾಯ ಶಿಕ್ಷಣ ಪಡೆದುಕೊಳ್ಳಬೇಕು, ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹೇಳಿದರು. ಇದರ ಜೊತೆಗೆ ಇಲಾಖೆ ಮೂಲಕ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಸುಮತಿ ಅವರು ಮಾತನಾಡಿ, ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಪ್ರತಿಯೊಂದು ಹೆಣ್ಣು ಮಗುವು ಶಿಕ್ಷಣವನ್ನು ಪಡೆದು, ತಮ್ಮ ಗುರಿ ತಲುಪಬೇಕು. ಯಾವುದೇ ತೊಂದರೆಗೊಳದಾಗ ತುರ್ತು ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿಗೆ ಅಥವಾ ತುರ್ತು ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು. ಹೆಣ್ಣು ಗಂಡು ನಡುವಿನ ಅಸಮಾನತೆ ಈ ಸಮಾಜದಲ್ಲಿ ಈಗಲೂ ಜೀವಂತವಾಗಿದೆ. ಅದನ್ನು ಹೋಗಲಾಡಿಸಬೇಕಾದರೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ರಸಪ್ರಶ್ನೆ ಏರ್ಪಡಿಸಿ, ಬಹುಮಾನ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಶಿನಿ ಅವರು ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಜೋಯಪ್ಪ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಶಿಕಲಾ, ಕೊಡಗು ಜಿಲ್ಲಾ ವಿಶೇಷ ಮಕ್ಕಳ ಘಟಕದ ಸಿಬ್ಬಂದಿ ಸತ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಿಬ್ಬಂದಿಗಳು, ಅಕ್ಕಪಡೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮರೂರು, ತಿತಿಮತಿ ಮತ್ತು ಯಡವನಾಡು ಆಶ್ರಮ ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ*
Next Article *ಪೊನ್ನಂಪೇಟೆ : ಜ.30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

Recommended: Website design development company services in Mangalore Forex Trading Teacher in India

Related Posts

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

ಮಡಿಕೇರಿ, NEWS DESK ಫೆ.12 : ನಗರದ ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ…

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.