Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ : ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು : ಟಿ.ಪಿ.ರಮೇಶ್ ಸಲಹೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ : ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು : ಟಿ.ಪಿ.ರಮೇಶ್ ಸಲಹೆ*

January 26, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.26 NEWS DESK : ಸವಿತಾ ಸಮಾಜವು ಹಿಂದುಳಿದ ವರ್ಗಕ್ಕೆ ಸೇರಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ತುಂಬಾ ಹಿಂದೆ ಇದ್ದಾರೆ. ಆದ್ದರಿಂದ ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ  ನಡೆದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತೀಯ ವ್ಯವಸ್ಥೆಯಲ್ಲಿ ಸಮ ಸಮಾಜ ನಿರ್ಮಾಣ ಆಗುವವರೆಗೆ ಸರ್ಕಾರದ ಮೀಸಲಾತಿ ಸೌಲಭ್ಯ ಪಡೆದು ಶಿಕ್ಷಣ ಮತ್ತು‌ ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕು ಎಂದು ಟಿ.ಪಿ.ರಮೇಶ್ ಅವರು ಕರೆ ನೀಡಿದರು. ರಾಷ್ಟ್ರದ ಎಲ್ಲೆಡೆ ಇರುವ ಸವಿತಾ ಸಮಾಜದವರು ವೃತ್ತಿಯ ಜತೆಗೆ ಎಂಜಿನಿಯರಿಂಗ್, ವೈದ್ಯಕೀಯ ಮತ್ತಿತರ ಕ್ಷೇತ್ರದಲ್ಲಿ ಬೆಳವಣಿಗೆ ಹೊಂದಬೇಕು ಎಂದರು. ಹಿರಿಯ ಪತ್ರಕತ೯ ಅನಿಲ್ ಎಚ್.ಟಿ. ಮಾತನಾಡಿ, ಸಮಾಜ ಮತ್ತು ಸಮಾಜದ ಜನರು ಸುಂದರವಾಗಿ ಇರುವಲ್ಲಿ ಸವಿತಾ ಸಮಾಜದವರ ಕೊಡುಗೆ ಅಪಾರವಾಗಿದೆ. ನಿಜಾಥ೯ದಲ್ಲಿಯೂ ಸವಿತಾ ಸಮಾಜದವರು ಸಮಾಜದ ಜನತೆಯನ್ನು ಸುಂದರವಾಗಿ ರೂಪಿಸುಲ್ಲಿ ಕಾರಣರಾಗಿದ್ದಾರೆ. ಸವಿತಾ ಸಮಾಜದ ಬಾಂಧವರ ಕಾಯ೯ ಇಲ್ಲದ ಸಮಾಜವನ್ನು ಊಹಿಸಲೇ ಸಾಧ್ಯವಿಲ್ಲ ಎಂದರು. ಸವಿತಾ ಮಹಷಿ೯ಗಳು ಯುಗಪುರುಷರಾಗಿದ್ದಾರೆ ಎಂದು ಬಣ್ಣಿಸಿದ ಅನಿಲ್, ರಥಸಪ್ತಮಿಯಂದೇ ಜನಿಸಿದ ಸವಿತಾ ಮಹಷಿ೯ಗಳು, ದೇವರ ಆಯುಷ್ಕಮ೯ ಮಾಡುವ ಸೇವಾ ಕೈಂಕಯ೯ದಲ್ಲಿ ತೊಡಗಿಸಿಕೊಂಡಿದ್ದರಲ್ಲದೇ ನಾದಸ್ವರಕ್ಕೂ ಸವಿತಾ ಮಹಷಿ೯ಗಳ ಕೊಡುಗೆ ಅಪಾರ ಎಂದರು. ಸವಿತಾ ಸಮಾಜದವರ ವೖತ್ತಿಯು ಆಧುನಿಕ ತಂತ್ರಜ್ಞಾನಗಳ ಸುಳಿಯಲ್ಲಿ ಸಿಲುಕಿದೆ. ಹೀಗಿದ್ದರೂ ಯಾವುದೇ ಯಂತ್ರಗಳು ಕೂಡ ವ್ಯಕ್ತಿಯ ವೃತ್ತಿ ಕೌಶಲ್ಯತೆಗೆ ಸರಿಸಾಟಿಯಾಗಲಾರದು ಎಂದು ಅಭಿಪ್ರಾಯಪಟ್ಟ ಅನಿಲ್ ಹೆಚ್.ಟಿ. ಹೀಗಾಗಿ ಸವಿತಾ ಸಮಾಜದವರಿಗೆ ವೖತ್ತಿಯಲ್ಲಿನ ಸವಾಲುಗಳ ಆತಂಕ ಅನಗತ್ಯ ಎಂದರು.  ಸಕಾ೯ರಗಳು ಪ್ರತೀ ಸಮುದಾಯ ಮಹನೀಯರ ಸಮಾಜಸೇವಾ ಸಾಧನೆಯನ್ನು ಸ್ಮರಿಸಿ ಗೌರವಿಸುವ ನಿಟ್ಟಿನಲ್ಲಿ ಜಯಂತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಆಯೋಜಿಸುತ್ತಾ ಬಂದಿದೆ. ಇಂಥ ಜಯಂತಿ ಮೂಲಕ ಸಮಾಜದ ವಿವಿಧ ಜಾತಿ, ಧಮ೯ಗಳ ಮಹನೀಯರನ್ನು ಸಮಾಜಭಾಂದವರು ಸ್ಮರಿಸುವಂತಾಗುತ್ತದೆ ಎಂದೂ ಅನಿಲ್ ಹೇಳಿದರು.  ಕೊಡಗು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ದೊರೇಶ್, ತಾಲ್ಲೂಕು ಅಧ್ಯಕ್ಷರಾದ ಮಧು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಮಾತನಾಡಿದರು. ಸವಿತಾ ಸಮಾಜದ ಮುಖಂಡರು ಇತರರು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ 77ನೇ ಗಣರಾಜ್ಯೋತ್ಸವ ಆಚರಣೆ*
Next Article ಕೊಡಗು : ಪ್ರತಿಯೊಬ್ಬ ಯುವ ಮತದಾರರು ತಪ್ಪದೆ ಹಕ್ಕು ಚಲಾಯಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.