Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಹಾರಾಜ ಟ್ರೋಫಿ ಪಂದ್ಯಾವಳಿ : ಜು.29 ರಂದು ಮೈಸೂರು ವಾರಿಯರ್ಸ್ ತಂಡದಿಂದ ಟ್ಯಾಲೆಂಟ್ ಹಂಟ್*
ಇತ್ತೀಚಿನ ಸುದ್ದಿಗಳು

*ಮಹಾರಾಜ ಟ್ರೋಫಿ ಪಂದ್ಯಾವಳಿ : ಜು.29 ರಂದು ಮೈಸೂರು ವಾರಿಯರ್ಸ್ ತಂಡದಿಂದ ಟ್ಯಾಲೆಂಟ್ ಹಂಟ್*

July 26, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.26 : ಮುಂಬರುವ ಮಹಾರಾಜ ಟ್ರೋಫಿ- 2023ಕ್ಕಾಗಿ ಸೈಕಲ್ ಪ್ಯೂರ್ ಅಗರಬತ್ತಿ ಒಡೆತನದ ಮೈಸೂರು ವಾರಿಯರ್ಸ್ ತಂಡದಿಂದ ಜು.29 ರಂದು ಮೈಸೂರಿನಲ್ಲಿ ಟ್ಯಾಲೆಂಟ್ ಹಂಟ್ ನಡೆಯಲಿದೆ.
ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್ನ ಹೆಮ್ಮೆಯ ಮಾಲೀಕರಾದ ಸೈಕಲ್ ಪ್ಯೂರ್ ಅಗರಬತ್ತಿ, ಕರ್ನಾಟಕದ ವಿವಿಧ ಪ್ರದೇಶಗಳಿನ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಮುಂಬರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 2023 ಸರಣಿಗಾಗಿ ಜುಲೈ 29 ರಂದು ಮೈಸೂರು ನಗರದ ಎಸ್‌ಎನ್‌ಡಿಆರ್ ಕ್ರೀಡಾಂಗಣದಲ್ಲಿ ಟ್ಯಾಲೆಂಟ್ ಹಂಟ್ ಅನ್ನು ಆಯೋಜಿಸಿದೆ.
ಈ ಕಾರ್ಯಕ್ರಮ ದೂರದ ಪ್ರದೇಶಗಳ ಮಹತ್ವಾಕಾಂಕ್ಷಿ ಕ್ರೀಡಾಪಟುಗಳನ್ನು ವಿಶೇಷವಾಗಿ ಕ್ರಿಕೆಟ್ ಕ್ಷೇತ್ರದಲ್ಲಿನ ಪ್ರತಿಭೆಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ. ರಾಜ್ಯದ ಎಲ್ಲಾ ಉದಯೋನ್ಮುಖ ಪ್ರತಿಭೆಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಬಹುದು ಮತ್ತು ಈ ವರ್ಷದ ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಪಡೆದುಕೊಳ್ಳಬಹುದು.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಅಡಿಯಲ್ಲಿ ನೋಂದಾಯಿತ ಕ್ಲಬ್‌ಗಳನ್ನು ಪ್ರತಿನಿಧಿಸುವ ಅತ್ಯುತ್ತಮ ಆಟಗಾರರ ಆಯ್ಕೆಗಾಗಿ ಈ ಬಹು ನಿರೀಕ್ಷಿತ ಟ್ಯಾಲೆಂಟ್ ಹಂಟ್ ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ.
ಭಾಗವಹಿಸುವ ಕ್ರೀಡಾಪಟುಗಳು ಕಳೆದ ಎರಡು ವರ್ಷಗಳಿಂದ ತಮ್ಮ ಕೆಎಸ್‌ಸಿಎ ಅಂಕಿಅಂಶಗಳು ಮತ್ತು ಸುಸಜ್ಜಿತ ಕ್ರಿಕೆಟ್ ಕಿಟ್‌ಗಳೊಂದಿಗೆ ಬರಬೇಕು. ಆಯ್ಕೆ ಸುಗಮಗೊಳಿಸಲು ಅಗತ್ಯ ಕ್ರಿಕೆಟ್ ಚೆಂಡುಗಳನ್ನು ಒದಗಿಸಲಾಗುವುದು.
::: 215 ಆಟಗಾರರು :::
ಕಳೆದ ಬಾರಿಯ ಪ್ರತಿಭಾನ್ವೇಷಣೆಯ ಸಂದರ್ಭದಲ್ಲಿ ಮೈಸೂರು ವಾರಿಯರ್ಸ್ ಮೈಸೂರು ಮತ್ತು ಬೆಂಗಳೂರು ಎರಡರಲ್ಲೂ ಟ್ಯಾಲೆಂಟ್ ಹಂಟ್ ನಡೆಸಿ, ಅಗಾಧ ಪ್ರತಿಕ್ರಿಯೆಯನ್ನು ಪಡೆದಿತ್ತು. ಕಳೆದ ವರ್ಷ, ಮೈಸೂರಿನ ಎಸ್‌ಡಿಎನ್‌ಆರ್ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಾರಿಯರ್ಸ್ ತಂಡದಲ್ಲಿ ಈ ಕಾರ್ಯಕ್ರಮದಲ್ಲಿ 215 ಯುವ ಕ್ರಿಕೆಟಿಗರರು ಭಾಗಿಯಾಗಿದ್ದರು. ಪ್ರತಿಭಾನ್ವಿತರಲ್ಲಿ, 85 ಮಧ್ಯಮ ವೇಗದ ಬೌಲರ್‌ಗಳು, 32 ಸ್ಪಿನ್ನರ್‌ಗಳು, 35 ಬ್ಯಾಟ್ಸ್ ಮನ್ ಗಳು 58 ಆಲ್-ರೌಂಡರ್‌ಗಳು ಮತ್ತು 05 ವಿಕೆಟ್‌ಕೀಪರ್‌ಗಳು ಇದ್ದರು.
ಪ್ರತಿಷ್ಠಿತ ಕೆಪಿಎಲ್ ಟೂರ್ನಮೆಂಟ್‌ನಲ್ಲಿ ಮೈಸೂರು ವಾರಿಯರ್ಸ್ ಅನ್ನು ಹೆಮ್ಮೆಯಿಂದ ಪ್ರತಿನಿಧಿಸಲು ಕಳೆದ ವರ್ಷ ಉತ್ತಮ್ ಅಯ್ಯಪ್ಪ ಹಾಗೂ ಚೇತನ್ ಎಲ್.ಆರ್ ಅವರು ಈ ಪ್ರಕ್ರಿಯೆಯಿಂದ ಆಯ್ಕೆಗೊಂಡಿದ್ದರು. ಕ್ರಿಕೆಟ್ ಮೈದಾನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಈ ಇಬ್ಬರು ಆಟಗಾರರು ತಮ್ಮ ಸಾಮರ್ಥ್ಯ ಸಾಬೀತುಪಡಿಸಿಕೊಂಡಿದ್ದಾರೆ.
::: ಉತ್ತೇಜಿಸಲು ಪ್ರತಿಭಾನ್ವೇಷಣೆ :::
ಟ್ಯಾಲೆಂಟ್ ಹಂಟ್ ಕುರಿತು ಪ್ರತಿಕ್ರಿಯಿಸಿರುವ ಮೈಸೂರು ವಾರಿಯರ್ಸ್ನ ಮಾಲೀಕರಾದ ಅರ್ಜುನ್ ರಂಗ, “ಎನ್‌ಆರ್ ಗ್ರೂಪ್‌ನಲ್ಲಿ, ವಿಶೇಷವಾಗಿ ಕ್ರಿಕೆಟ್‌ನಂತಹ ಕ್ರೀಡೆಗಳಲ್ಲಿ ಮಹತ್ವಾಕಾಂಕ್ಷಿ ಪ್ರತಿಭೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆ. ಮೈಸೂರಿನಲ್ಲಿ ಈ ಪ್ರತಿಭಾನ್ವೇಷಣೆಯನ್ನು ಆಯೋಜಿಸಲು ನಾವು ಹೆಮ್ಮೆಪಡುತ್ತೇವೆ. ಇದು ಮೈಸೂರು ವಾರಿಯರ್ಸ್ ಅನ್ನು ಪ್ರತಿನಿಧಿಸುವ ಅವಕಾಶವನ್ನು ಆಟಗಾರರಿಗೆ ಒದಗಿಸುತ್ತಿದೆ. ಅತ್ಯುತ್ತಮ ಪ್ರತಿಭೆಗಳನ್ನು ಗುರುತಿಸುವುದು, ಆಯ್ಕೆ ಮಾಡುವುದು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಅವರಿಗೆ ಸಮಗ್ರ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುವುದು ನಮ್ಮ ಪ್ರಾಥಮಿಕ ಗುರಿಯಾಗಿದೆ’ ಎಂದು ತಿಳಿಸಿದ್ದಾರೆ.
::: 6 ತಂಡಗಳ ಪೈಪೋಟಿ :::
ಐಪಿಎಲ್ ಮಾದರಿಯಿಂದ ಸ್ಫೂರ್ತಿ ಪಡೆದಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಈ ವರ್ಷ ಆರು ತಂಡಗಳ ನಡುವಿನ ತೀವ್ರ ಪೈಪೋಟಿಯ 20-20 ಪಂದ್ಯಾವಳಿಯನ್ನು ಆಯೋಜಿಸಲು ಸಿದ್ಧವಾಗಿದೆ. ಎನ್‌ಆರ್ ಗ್ರೂಪ್ ಹಲವು ವರ್ಷಗಳಿಂದ ತನ್ನ ಬ್ರ‍್ಯಾಂಡ್ ಸೈಕಲ್ ಪ್ಯೂರ್ ಅಗರವಬತ್ತಿಗೆ ಹೆಸರುವಾಸಿಯಾಗಿದೆ, ಭಾರತದಾದ್ಯಂತ ಕ್ರಿಕೆಟ್ ಪಾಲುದಾರಿಕೆಯಲ್ಲಿ ತನ್ನದೇ ಖ್ಯಾತಿಯನ್ನು ಗಳಿಸಿದೆ. ರೆಡ್ ಅಲರ್ಟ್, ಥರ್ಡ್ ಅಂಪೈರ್ ಬ್ರ‍್ಯಾಂಡಿಂಗ್ ಮತ್ತು ಮೈಲ್‌ಸ್ಟೋನ್ ಬ್ರ‍್ಯಾಂಡಿಂಗ್‌ನಂತಹ ಉತ್ತೇಜಕ ಕ್ರಿಕೆಟ್ ಉಪಕ್ರಮಗಳಲ್ಲಿ ಬ್ರ‍್ಯಾಂಡ್ ತನ್ನನ್ನು ತೊಡಗಿಸಿಕೊಂಡಿದೆ.
ಇದಲ್ಲದೆ, ಸೈಕಲ್ ಪ್ಯೂರ್ ಅಗರಬತ್ತಿಯು ಪ್ರತಿ ವರ್ಷ ಹಲವಾರು ಕ್ರಿಕೆಟ್ ಪಂದ್ಯಾವಳಿಗಳಿಗೆ ಪ್ರಮುಖ ಪ್ರಾಯೋಜಕನಾಗಿ ಸತತವಾಗಿ ಸೇವೆ ಸಲ್ಲಿಸಿದೆ ಮತ್ತು ಅವರು ಇತ್ತೀಚೆಗಿನ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗಾಗಿ ಪ್ರತಿಷ್ಠಿತ ಶೀರ್ಷಿಕೆ ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ ಎಂದು ಅರ್ಜುನ್ ರಂಗ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಜು.29 ರಂದು ಬೆಳಗ್ಗೆ 8 ಗಂಟೆಯಿಂದ ಮೈಸೂರಿನ ಎಸ್‌ಡಿಎನ್‌ಆರ್ ಕ್ರೀಡಾಂಗಣದಲ್ಲಿ ಪ್ರತಿಭಾನ್ವೇಷಣೆಯ ಟ್ಯಾಲೆಂಟ್ ಹಂಟ್ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ಮಧುಸೂಧನ್ 9986024717 ಹಾಗೂ ಅರುಣ್ 9632976696 ನ್ನು ಸಂಪರ್ಕಿಸಬಹುದಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Article*ರೋಟರಿ ವುಡ್ಸ್ ನಿಂದ ಕಾಗಿ೯ಲ್ ವಿಜಯ ದಿನಾಚರಣೆ : ಮಾಜಿ ಸೈನಿಕರಿಗೆ ಸಮುದಾಯ ಭವನ ನಿಮಾ೯ಣಕ್ಕೆ ಪ್ರಯತ್ನ : ಶಾಸಕ ಡಾ.ಮಂಥರ್ ಗೌಡ*
Next Article *ಜು.30ಕ್ಕೆ ಜಿಲ್ಲಾ ಬಂಟರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ* 

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.