ಮಡಿಕೇರಿ ಸೆ.10 : ವಿದ್ಯುತ್ ಸ್ಪರ್ಷಗೊಂಡು ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಷಗೊಂಡಿದೆ. ಘಟನೆಯಿಂದ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಬಸವರಾಜ್ ಅವರು ಕಳೆದ 5 ವರ್ಷಗಳಿಂದ ವಿರಾಜಪೇಟೆ ಚೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.








