Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ವಿರಾಜಪೇಟೆ : ಕಲೆಗಳನ್ನು ಗುರುತಿಸಲು ಮಕ್ಕಳ ಕಲಿಕಾ ಹಬ್ಬ ಸಹಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ
ಇತ್ತೀಚಿನ ಸುದ್ದಿಗಳು

ವಿರಾಜಪೇಟೆ : ಕಲೆಗಳನ್ನು ಗುರುತಿಸಲು ಮಕ್ಕಳ ಕಲಿಕಾ ಹಬ್ಬ ಸಹಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ

January 20, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಜ.19 : ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿನ ವೈಜ್ಞಾನಿಕ ಮತ್ತು ಕೌಶಲ್ಯ ಆಧಾರಿತ ಕಲೆಗಳನ್ನು ಗುರುತಿಸಲು ಮಕ್ಕಳ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಹೇಳಿದರು.
ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಕಲ್ತೋಡು ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಹಬ್ಬವನ್ನು ಬಣ್ಣ ತುಂಬಿದ ಬಲೂನು ಒಡೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಮಕ್ಕಳಿಗೆ ಸಮಗ್ರ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಈ ಕಲಿಕಾ ಹಬ್ಬವನ್ನು ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಆಚರಿಸಲಾಗುತ್ತಿದೆ. ಈ ಹಬ್ಬದಲ್ಲಿ ವಿದ್ಯಾರ್ಥಿಗಳು ತಾವೇ ಚರ್ಚಿಸಿ, ತಾರ್ಕಿಕವಾಗಿ ಆಲೋಚಿಸಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗಗಳನ್ನು ತಾವೇ ಕಂಡುಕೊಳ್ಳುತ್ತಾರೆ. ಶಿಕ್ಷಕರ ಸಹಾಯದ ಮೂಲಕ ಅನೇಕ ವೈಜ್ಞಾನಿಕ ಮತ್ತು ಕೌಶಲ್ಯ ಕಲೆಗಳನ್ನು ಸೃಷ್ಟಿಸುವ ಮೂಲಕ ತಮ್ಮಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ಹಾಕುತ್ತಾರೆ. ಮಕ್ಕಳ ಸರ್ವಾಂಗೀಣ ಪ್ರಗತಿ ಮತ್ತು ಸ್ವಕಲಿಕೆಯ ಮಾದರಿಯ ಕಲೆಗಳ ವಿಧಾನವನ್ನು ಕಲಿಸಿಕೊಡುವುದೇ ಈ ಕಲಿಕಾ ಕಾರ್ಯಕ್ರಮದ ಉದ್ದೇಶವಾಗಿದೆ.
ಮಕ್ಕಳು ತಮ್ಮದೇ ಆದ ಲೋಕದಲ್ಲಿ ಸಂತೋಷ ಮತ್ತು ಸಂಭ್ರಮದಿಂದ ತಮ್ಮಲ್ಲಿರುವ ಪ್ರಯೋಗಗಳನ್ನು, ಕೌಶಲ್ಯವನ್ನು ಪ್ರದರ್ಶಿಸಲು ಇಲ್ಲಿ ಮುಕ್ತ ಅವಕಾಶವಿದೆ. ಕಲಿಕಾ ಹಬ್ಬದ ಚಟುವಟಿಕೆಗಳಲ್ಲಿ ಆಡು ಹಾಡು, ಕಾಗದ ಕತ್ತರಿ, ಊರು ತಿಳಿಯೋಣ, ಮಾಡು ಆಡು ಎಂಬ ಗುಂಪುಗಳನ್ನು ರಚಿಸಲಾಗಿದೆ. ಇಲ್ಲಿ ಮಕ್ಕಳು ಖುಷಿಯಿಂದ ಪಾಲ್ಗೊಳ್ಳುವ ಮೂಲಕ ತಮ್ಮ ಚಟುವಟಿಕೆಗಳನ್ನು ಮಾಡುತ್ತಾರೆ. ಈ ಹಬ್ಬ ಎಲ್ಲಾ ಕ್ಲಸ್ಟರ್ ಮಟ್ಟದಲ್ಲಿ ಎರಡು ದಿನಗಳ ಕಾಲ ಜರುಗಲಿದೆ ಎಂದು ಹೇಳಿದರು.
ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಶಶಿಕಾಂತ್ ವಹಿಸಿಕೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧ, ಹಾಗೂ ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಮಣಿ, ಎಸ್‍ಎಸ್‍ಎಲ್‍ಸಿ ನೋಡಲ್ ಅಧಿಕಾರಿ ಅಯ್ಯಪ್ಪ, ಬಿಆರ್‍ಸಿ ಗೀತಾಂಜಲಿ, ಸಿಆರ್‍ಪಿ ವೆಂಕಟೇಶ್, ಪ್ರಾಥಮಿಕ ಸಂಘದ ನಿರ್ದೇಶಕರಾದ ದೇವರಾಜ್, ತಾಲ್ಲೂಕು ದೈಹಿಕ ಶಿಕ್ಷಣ ಉಪಾಧ್ಯಕ್ಷ ತಮ್ಮಯ್ಯ, ಹೆಗ್ಗಳ ಶಾಲೆಯ ಮುಖ್ಯ ಶಿಕ್ಷಕರಾದ ಸುನಿತಾ ಬಿ.ಎಂ. ಹೆಗ್ಗಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಿ.ಎಂ.ಆಶಿಯಾ, ಸರಸ್ವತಿ ಮತ್ತು ಸಹ ಶಿಕ್ಷಕಿಯರು, ಅಡುಗೆ ಸಿಬ್ಬಂದಿ, ಅತಿಥಿ ಶಿಕ್ಷಕರು ಕ್ಲಸ್ಟರ್‍ನ 16 ಶಾಲೆಯ ಕಲಿಕಾ ಹಬ್ಬಕ್ಕೆ ಆಯ್ಕೆಯಾಗಿರುವ 120 ಮಕ್ಕಳು ಶಿಕ್ಷಕರು ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಕಲಿಕಾ ಹಬ್ಬ ಮಕ್ಕಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ : ಶಾಸಕ ಅಪ್ಪಚ್ಚು ರಂಜನ್
Next Article ಗುತ್ತಿಗೆ ಆಧಾರದಲ್ಲಿ ಭೂಮಿ ನೀಡಲು ಸೋಮಾವಾರಪೇಟೆ ರೈತ ಸಂಘ ಒತ್ತಾಯ

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.