
ಬೆಂಗಳೂರು ಸೆ.24 NEWS DESK: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ (94) ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ಇಂದಿಗೂ ಕೂಡ ಎಸ್ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ. ಮೈಸೂರಿನಲ್ಲಿ ವಾಸವಿದ್ದ ಎಸ್.ಎಲ್.ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ 20-08-1931 ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು.







