ಮಡಿಕೇರಿ ಜ.2 : ಜಿಲ್ಲಾ ದಿವ್ಯಾಂಗರ ಒಕ್ಕೂಟ ಹಾಗೂ ಮಡಿಕೇರಿ ನಗರಸಭೆ ಸಂಯುಕ್ತಾಶ್ರಯದಲ್ಲಿ ಜ.4 ರಂದು ದಿವ್ಯಾಂಗರ ದಿನಾಚರಣೆ ಹಾಗೂ ದಿವ್ಯಾಂಗರ ಕುಂದುಕೊರತೆ ಸಭೆ ನಡೆಯಲಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸಮಾಜ ಸೇವಕರಾದ ತೇಲಪಂಡ ಶಿವಕುಮಾರ್ ನಾಣಯ್ಯ, ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಕೇತ್ ಪೂವಯ್ಯ, ನಾಪಂಡ ಮುತ್ತಪ್ಪ, ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ರವಿ ಗೌಡ, ಜಿಲ್ಲಾ ದಿವ್ಯಾಂಗರ ಒಕ್ಕೂಟದ ಅಧ್ಯಕ್ಷೆ ಎನ್.ಕೆ.ಈಶ್ವರಿ ಪಾಲ್ಗೊಳ್ಳಲಿದ್ದಾರೆ.









