ಮಡಿಕೇರಿ ಜ.2 : ಸೋಮವಾರಪೇಟೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಜ.9 ರಂದು ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಬಸ್ಸು ನಿಲ್ದಾಣ ಉದ್ಘಾಟನೆ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಜೆ.ಸಿ.ವೇದಿಕೆಯಿಂದ ವಿವಿಧ ಕಲಾ ತಂಡಗಳು ಹಾಗೂ ಪೂರ್ಣ ಕುಂಭ ಕಳಸದೊಂದಿಗೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮೆರವಣಿಗೆ ನಡೆಯಲಿದೆ.
ನಂತರ 10 ಗಂಟೆಗೆ ತುಮಕೂರು ಶ್ರೀ ಸಿದ್ದಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಾಗೂ ವಿರಾಜಪೇಟೆ ಅರಮೇರಿ, ಕಳಂಚೇರ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅಮ್ಮತ್ತಿ ಕನ್ನಡಮಠದ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಮಹಾಂತ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲುಮಠದ ಸದಾಶಿವ ಸ್ವಾಮೀಜಿ, ಬಸವಪಟ್ಟಣ ತೋಂಟದಾರ್ಯ ಸಂಸ್ಥಾನಮಠದ ಸ್ವತಂತ್ರ ಬಸವಲಿಂಗ ಸ್ವಾಮಿಜಿ, ತೊರೆನೂರು ವಿರಕ್ತಮಠದ ಮಲ್ಲೇಶ ಸ್ವಾಮೀಜಿ, ಅಂಕನಳ್ಳಿ ಮನೆಹಳ್ಳಿಮಠದ ತಪೋಕ್ಷೇತ್ರ ಮಹಾಂತ ಶಿವಲಿಂಗ ಸ್ವಾಮೀಜಿ, ಮಾದ್ರೆ ಮುದ್ದಿನಕಟ್ಟೆಮಠ ಅಭಿನವ ಸಿದ್ದಲಿಂಗ ಶಿವಾರ್ಚರ್ಯ ಸ್ವಾಮೀಜಿ, ಕೆಸವತ್ತೂರುಮಠದ ಬಸವರಾಜೇಂದ್ರ ಸ್ವಾಮಿಜಿ, ರಾವಂದೂರು ಮಠ ಮೋಕ್ಷಪತಿ ಸ್ವಾಮೀಜಿ, ಅರಕಗೂಡು ಚಿಲುಮೆ ಮಠ ಜಯದೇವ ಸ್ವಾಮೀಜಿ, ಶಿಡಿಗಳಲೆ ಮಠ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠ ರುದ್ರಮುನಿ ಸ್ವಾಮೀಜಿ, ಚಿಕ್ಕಬಳ್ಳಾಪುರ ನಿಶ್ಚಲದೇಶಿಕೇಂದ್ರ ಸ್ವಾಮೀಜಿ, ಸೋಮವಾರಪೇಟೆ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಬಸ್ಸು ನಿಲ್ದಾಣ ಉದ್ಘಾಟಿನೆ ಹಾಗೂ 11 ಗಂಟೆಗೆ ಸಾಕ್ಷಿ ಕನ್ವೆನ್ಷನ್ ಹಾಲ್ ಸಭಾಂಗಣದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಕೊಡಗು ಉಸ್ತುವಾರಿ ಸಚಿವ ನಾಗೇಶ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಕ್ಷೇತ್ರದ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಸೋಮವಾರಪೇಟೆ ಪ.ಪಂ ಅಧ್ಯಕ್ಷ ಪಿ.ಕೆ.ಚಂದ್ರು, ಉಪಾಧ್ಯಕ್ಷ ಬಿ.ಸಂಜೀವ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರೋಹಿತ್ ಹೆಚ್ ಪಾಲ್ಗೊಳ್ಳಲಿದ್ದಾರೆ.