ಮಡಿಕೇರಿ ಜ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯು ಜನವರಿ, 3 ಮತ್ತು 4 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜನವರಿ, 3 ರಂದು ಬೆಳಗೆ 10.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ತಹಶೀಲ್ದಾರ್ ಪಿ.ಎಸ್.ಮಹೇಶ್, ಪೌರಾಯುಕ್ತರಾದ ವಿಜಯ ಇತರರು ಪಾಲ್ಗೊಳ್ಳಲಿದ್ದಾರೆ.









