ಕುಶಾಲನಗರ ಜ.2 : ಕುಶಾಲನಗರ ತಾಲೂಕಿನ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ನಾಗೇಶ್ ಭೇಟಿ ನೀಡಿದರು.
ಶಾಲಾ ಮಕ್ಕಳ ಕಲಿಕೆಯ ಬಗ್ಗೆ ಮತ್ತು ಶಾಲಾ ಅಭಿವೃದ್ಧಿ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಶೈಕ್ಷಣಿಕ ಪ್ರಗತಿಯ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದು ನೂತನ ಕಟ್ಟಡ ನಿರ್ಮಾಣದ ಕುರಿತು ಅವಶ್ಯಕತೆ ಇರುವ ಅನುದಾನದ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭಜಿಲ್ಲಾ ಸಾರ್ವಜನಿಕ ಶಿಕ್ಷಣಾಧಿಕಾರಿ ಸಿ.ರಂಗಧಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ ಸುರೇಶ್, ತಾಲೂಕು ತಹಶೀಲ್ದಾರ್ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಮಹೇಶ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಣ್ಣಯ್ಯ, ಮುಖ್ಯ ಶಿಕ್ಷಕಿ ಕಾಮಕ್ಷಿ ಮತ್ತಿತರರು ಇದ್ದರು.









