ಮಡಿಕೇರಿ ಜ.3 : ಕೊಡಗು ಜಿಲ್ಲೆಯ ಹೆಚ್ಚುವರಿ ಎಸ್.ಪಿ.ಆಗಿ ಕೆ.ಎಸ್.ಸುಂದರರಾಜ್ ನೇಮಕಗೊಂಡಿದ್ದಾರೆ.
ಚಾಮರಾಜ ನಗರದ ಎ.ಎಸ್.ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸುಂದರರಾಜ್ ಅವರು ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ ಆಗಿ, ಡಿವೈಎಸ್‍ಪಿ ಆಗಿ ಕಾರ್ಯನಿರ್ವಹಿಸಿದ್ದರು.
ರಾಷ್ಟ್ರಪತಿ ಪದಕ ಪಡೆದ ಅಧಿಕಾರಿಯಾಗಿರುವ ಇವರನ್ನು ಕೊಡಗು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.









