ಮಡಿಕೇರಿ ಜ.3 : ಜಿಲ್ಲಾ ಗೃಹರಕ್ಷಕದಳ ಕೊಡಗು ಜಿಲ್ಲೆ ಮಡಿಕೇರಿ ಕಚೇರಿಯಲ್ಲಿ 2022-23 ನೇ ಸಾಲಿಗೆ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹ ರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಡಗು ಜಿಲ್ಲೆಯ ನಿವಾಸಿಯಾಗಿರುವ 20 ವರ್ಷ ಮೇಲ್ಪಟ್ಟ 40 ವರ್ಷದೊಳಗಿನ ಹಾಗೂ 10ನೇ ತರಗತಿ ತೇರ್ಗಡೆ ಹೊಂದಿರುವ ದೃಢಕಾಯರಾಗಿರುವ ಪುರುಷ, ಮಹಿಳಾ ಅಭ್ಯರ್ಥಿಗಳು ಜನವರಿ, 13 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸ ಬಯಸುವ ಸದಸ್ಯರು ಜಿಲ್ಲಾ ಗೃಹರಕ್ಷಕದಳ ಕಚೇರಿ, ಡೈರಿಫಾರಂ ಮಡಿಕೇರಿ(ದೂ.ಸಂ.08272-228427) ಮತ್ತು ಕೊಡಗು ಜಿಲ್ಲೆಯಲ್ಲಿರುವ ಗೃಹರಕ್ಷಕದಳದ ಘಟಕ ಕಚೇರಿಯ ಘಟಕಾಧಿಕಾರಿಗಳನ್ನು ಸಂಪರ್ಕಿಸಬಹುದು.
ಘಟಕಾಧಿಕಾರಿಗಳ ವಿವರ ಮಡಿಕೇರಿ ಘಟಕ ವೈ.ಎನ್.ಕವನ್‍ಕುಮಾರ್ 9448204356, ಭಾಗಮಂಡಲ ಎನ್.ಪಿ.ಲೋಕನಾಥ 9108209941, ವಿರಾಜಪೇಟೆ ಎಚ್.ಸಿ.ತಿಮ್ಮು 9663765849, ಕುಶಾಲನಗರ ಬಿ.ಕೆ.ಪುಟ್ಟರಾಜು 9242116174, ಸೋಮವಾರಪೇಟೆ ಎಚ್.ಕೆ.ತ್ಯಾಗರಾಜು 9481431221, ಶಾಂತಳ್ಳಿ ಎಸ್.ಆರ್.ದೇವರಾಜು 9482729233, ಶನಿವಾರಸಂತೆ ಈ.ಬಿ.ಲೋಕೇಶ 9902047075 ಇವರಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಘಟಕಾಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಗೃಹ ರಕ್ಷಕದಳದ ಸಮಾದೇಷ್ಟರಾದ ಗಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.
Breaking News
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*