ಮಡಿಕೇರಿ ಜ.3 : ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ 11 ನೇ ಸಮ್ಮೇಳನದ ಸ್ವಾಗತ ಸಮಿತಿ ಸಭೆಯು ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರ ಉಪಸ್ಥಿತಿಯಲ್ಲಿ ಜನವರಿ, 4 ರಂದು ಮಧ್ಯಾಹ್ನ 3.30 ಗಂಟೆಗೆ ಬೆಟ್ಟಗೇರಿಯ ಉದಯ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರು ಮತ್ತು ತಾಲ್ಲೂಕು ಕಸಾಪ ಅಧ್ಯಕ್ಷ ನವೀನ್ ಅಂಬೆಕಲ್ ತಿಳಿಸಿದ್ದಾರೆ.









