ಕುಶಾಲನಗರ ಜ.3 : ಕುಶಾಲನಗರ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಕನ್ನಡ ಹಬ್ಬವಾಗಿ ಆಚರಿಸಲು ಎಲ್ಲರೂ ಕೈಜೋಡಿಸಬೇಕೆಂದು ಪ್ರಥಮ ಸಾಹಿತ್ಯ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷರಾದ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ವುರಂಜನ್ ಕರೆನೀಡಿದ್ದಾರೆ.
ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಸಮ್ಮೇಳನದ ಅಂಗವಾಗಿ ಊರಿನ ಕಟ್ಟಡಗಳು, ಬೀದಿಗಳನ್ನು ಅಲಂಕರಿಸುವ ಮೂಲಕ ಸಮ್ಮೇಳನವನ್ನು ವ್ಯವಸ್ಥಿತವಾಗಿ, ಯಶಸ್ವಿಯಾಗಿ ನಡೆಸುವ ಸಂಬಂಧ ಸಾರ್ವಜನಿಕರು ಹಾಗು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಸಾಹಿತ್ಯ, ಕಲೆ, ಸಂಸ್ಕøತಿ ಬೆಳಗಲು ವಿದ್ಯಾರ್ಥಿಗಳ ಪಾತ್ರ ಹಾಗೂ ಸಮ್ಮೇಳನದ ಮೆರವಣಿಗೆಯ ರೂಪುರೇμÉಗಳ ಕುರಿತು ಸಲಹೆ ನೀಡಿದರು.ಸಮ್ಮೇಳನಕ್ಕೆ ಅಗತ್ಯವಿರುವ ಆರ್ಥಿಕ ಕ್ರೋಢಿಕರಣದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಕುಶಾಲನಗರದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಜಾತಿ, ಮತ ಭೇದಗಳನ್ನು ಲೆಕ್ಕಿಸದೆ ಸರ್ವರೂ ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಸಾಪ ನಿಕಟಪೂರ್ವಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು.
ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವಕಾಮತ್ ತಿಳಿಸಿದರು.
ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ಪುರಸಭೆ ಅಧ್ಯಕ್ಷ ಜಯವರ್ಧನ, ಉಪಾಧ್ಯಕ್ಷೆ ಸುರಯ್ಯಭಾನು, ಕಸಾಪ ಜಿಲ್ಲಾ ಸಮಿತಿ ಪದಾಧಿಕಾರಿಗಳಾದ ಎಂ.ಬಿ.ಜೋಯಪ್ಪ, ಎಂ.ಇ.ಮೊಹಿದ್ದೀನ್, ಡೆನ್ನಿಸ್‍ಡಿಸೋಜ, ಫ್ಯಾನ್ಸಿ ಮುತ್ತಣ್ಣ, ತಾಲ್ಲೂಕು ಕಾರ್ಯದರ್ಶಿ ಎಸ್.ನಾಗರಾಜು, ಸೂದನ ರತ್ನಾವತಿ, ಸಮ್ಮೇಳನ ಸಮಿತಿ ಕಾರ್ಯದರ್ಶಿ ಹೆಚ್.ಬಿ.ಲಿಂಗಮೂರ್ತಿ ಮತ್ತು ವಿವಿಧ ಉಪಸಮಿತಿಗಳ ಅಧ್ಯಕ್ಷರು, ಸಂಚಾಲಕರು, ಇಲಾಖಾ ಅಧಿಕಾರಿಗಳು ಇದ್ದರು.
ಶ್ರದ್ಧಾಂಜಲಿ- ಸಭೆಗಿಂತ ಮುನ್ನ ಸೋಮವಾರ ರಾತ್ರಿ ಲಿಂಗೈಕ್ಯರಾದ ಜ್ಞಾನಯೋಗಾಶ್ರಮದ ಸಂತ ಸಿದ್ದೇಶ್ವರ ಸ್ವಾಮೀಜಿಗಳಿಗೆ ಸಂತಾಪ ಸೂಚಿಸಲಾಯಿತು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*