ಸುಂಟಿಕೊಪ್ಪ ಜ.4 : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಕೊಡಗು ಜಿಲ್ಲಾ ಪ್ರಾಚಾರ್ಯರುಗಳ ಸಂಘದ ವತಿಯಿಂದ 2021-22 ಸಾಲಿನಲ್ಲಿ ನಡೆದ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾಗುವ ಲ್ಯಾಪ್‌ಟಾಪ್ ಅನ್ನು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಿ.ಜೆ.ಸೌಮ್ಯ ಪಡೆದುಕೊಂಡರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಈಕೆ ವಾಣಿಜ್ಯ ವಿಷಯದಲ್ಲಿ 556 ಅಂಕ ಪಡೆದು ಪರಿಶಿಷ್ಟ ಜಾತಿ ವಿಭಾಗದಲ್ಲಿ ಕೊಡಗಿನ ಪ್ರಥಮ ಸ್ಥಾನವನ್ನು ಪಡೆದಿದ್ದರು.
ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್ ವಿತರಿಸಲಾಯಿತು. ಈಕೆ ಸುಂಟಿಕೊಪ್ಪ ಒಂದನೇ ವಿಭಾಗದ ಜ್ಞಾನೇಶ್ ಮತ್ತು ಪ್ರೇಮ ದಂಪತಿಗಳ ಪುತ್ರಿ.












