ಮಡಿಕೇರಿ ಜ.4 : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‍ವೈಎಸ್ ಹಾಗೂ ಎಸ್‍ಎಸ್‍ಎಫ್ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಭಾಗವಾಗಿ ಕೊಡಗು ಜಿಲ್ಲೆಯಲ್ಲಿ ಜ.6 ರಂದು ಮೆಂಬರ್ ಶಿಪ್ ಡೇ ನಡೆಯಲಿದೆ ಎಂದು ಎಸ್‍ವೈಎಸ್ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಪಿ.ಮೊಯಿದ್ದಿನ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಿತಿನ ಹಾದಿಯಲ್ಲಿ ನಿಮ್ಮದ್ದೊಂದು ಹೆಜ್ಜೆ ಇರಲಿ” ಎಂಬ ಶೀರ್ಷಿಕೆಯಡಿಯಲ್ಲಿ 47 ವರ್ಷ ಮೇಲ್ಪಟ್ಟವರಿಗೆ ಸದಸ್ಯತ್ವ ನೀಡಿ ಲಕ್ಷಾಂತರ ಕಾರ್ಯಕರ್ತರನ್ನು ಸೇರಿಸಿಕೊಳ್ಳುವ ಕಾರ್ಯಕ್ರಮ ಇದಾಗಿದೆ ಎಂದರು.
ಇದೇ ಸಂದರ್ಭ 32 ರಿಂದ 47 ವರ್ಷದೊಳಗಿರುವವರಿಗೆ “ಪರಂಪರೆಯ ಪ್ರತಿನಿಧಿಗಳಾಗೋಣ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ಎಸ್.ವೈಎಸ್ ಸದಸ್ಯತನ ನೀಡುತ್ತಿದ್ದು, ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಸಮಿತಿಯು ಸಕ್ರೀಯವಾಗಿ ತೊಡಗಿಸಿಕೊಂಡಿದೆ ಎಂದು ಮಾಹಿತಿ ನೀಡಿದರು.
ಸಾಮಾಜಿಕ, ಧಾರ್ಮಿಕ ಹಾಗೂ ಸಾಂತ್ವನ (ಸಮಾಜ ಸೇವೆ)ಯಲ್ಲಿ ಕಾರ್ಯಾಚರಿಸುತ್ತಿರುವ ಈ ಸಂಘಟನೆಯನ್ನು ಜಿಲ್ಲೆಯಲ್ಲಿ ಇನ್ನಷ್ಟು ಬಲಪಡಿಸುವ ಗುರಿಹೊಂದಿದೆ. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ, ಕೋವಿಡ್ ಸಂದರ್ಭದಲ್ಲಿ ಜಾತಿ, ಧರ್ಮ ಭೇದವಿಲ್ಲದೆ ತೊಡಗಿಸಿಕೊಂಡು ಹಲವರಿಗೆ ಸಹಾಯಮಾಡಿ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ ಎಂದರು.
ಸುಮಾರು ನಾಲ್ಕು ದಶಕಗಳಿಂದ ಕರ್ನಾಟಕದಲ್ಲಿ ಕಾರ್ಯಾಚರಿಸುತ್ತಿರುವ ಎಸ್.ಎಸ್.ಎಫ್ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲೂ ಸಕ್ರೀಯವಾಗಿದೆ. ಕಲುಷಿತಗೊಂಡಿರುವ ಪ್ರಸ್ತುತ ಸನ್ನಿವೇಶದಲ್ಲಿ ಯುವ ತಲೆಮಾರನ್ನು ಒಳಿತಿನ ಹಾದಿಯಲ್ಲಿ ಕಾರ್ಯಾಚರಿಸಲು ಪ್ರೇರಣೆ ನೀಡಿ ರಾಷ್ಟ್ರಕ್ಕೂ, ಸಮಾಜಕ್ಕೂ ಮಾದರಿ ಜೀವನ ನಡೆಸುವ ಯುವ ಪಡೆಯನ್ನು ಸಮರ್ಪಿಸಲು ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ ಎಂದ ಮೊಯಿದ್ದಿನ್ 12 ರಿಂದ 32 ವರ್ಷದೊಳಗಿನ ಯುವಕರನ್ನು “ವ್ಯರ್ಥವಾಗದಿರಲಿ ಯವ್ವನ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ಎಸ್.ಎಸ್.ಎಫ್ ಸದಸ್ಯರನ್ನು ತನ್ನ ಸಂಘಟನೆಗೆ ಸೇರ್ಪಡೆಗೊಳಿಸಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್‍ಎಸ್‍ಎಫ್ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಎಂ.ಎ.ಶರೀಫ್, ಸದಸ್ಯ ಮಜೀದ್ ಕೊಂಡಗೇರಿ, ಕೆ.ಎಂ.ಜೆ ಕೊಡಗು ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ, ಎಸ್‍ವೈಎಸ್ ಕೋಶಾಧಿಕಾರಿ ಪಿ.ಎ.ಅಬ್ದುಲ್ಲ, ಕಾರ್ಯದರ್ಶಿ ಎಸ್.ಎಂ.ಹಂಝ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*