ಮಡಿಕೇರಿ ಜ.4 : ಸ್ವಚ್ಛ, ಪ್ರಾಮಾಣಿಕ, ಗೌರವ, ಘನತೆಯುಳ್ಳ ಸರ್ಕಾರಿ ಸೇವೆಗಳನ್ನು ಪಡೆಯುವುದು ಸ್ವಾಭಿಮಾನಿ ಕನ್ನಡಿಗರ ಹಕ್ಕು. ಅದನ್ನು ಸಾಕಾರಗೊಳಿಸಲೆಂದೇ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ರಾಜ್ಯಾದ್ಯಂತ “ಕರುನಾಡು ಕಟ್ಟೋಣ” ಅಭಿಯಾನವನ್ನು ಆರಂಭಿಸಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಜ್ಞಾನಸಿಂಧುಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಲಂಚ ಮತ್ತು ಭ್ರಷ್ಟಾಚಾರವನ್ನು ಸಂಪೂರ್ಣ ತೊಡೆದು ಹಾಕಿ, ಮದ್ಯ ನಿಷೇಧ, ಉತ್ತಮ ಸರ್ಕಾರಿ ಆಸ್ಪತ್ರೆ ನಿರ್ಮಿಸುವ ಮೂಲಕ ಪ್ರತಿಯೊಬ್ಬರೂ ಘನತೆಯಿಂದ ಬದುಕಬಹುದಾದ ವಾತಾವರಣ ಸೃಷ್ಟಿಸುವುದಾಗಿ ಭರವಸೆ ನೀಡಿದರು.
ಕೊಡಗಿನಲ್ಲಿ ದಶಕಗಳಿಂದಲೂ ಜ್ವಲಂತ ಸಮಸ್ಯೆಗಳಿದ್ದು, ಇಲ್ಲಿವರೆಗೂ ಪರಿಹಾರ ಕಂಡಿಲ್ಲ. ಅವೈಜ್ಞಾನಿಕ ಕಟ್ಟಡಗಳ ನಿರ್ಮಾಣದಿಂದ ಪ್ರಾಕೃತಿಕ ವಿಕೋಪ ಉಂಟಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.
ಜಿಲ್ಲೆಯ ಜನತೆ ಕೆಆರ್‍ಎಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇ ಆದಲ್ಲಿ ಉತ್ತಮ ಬದಲಾವಣೆ ಕಾಣಲು ಸಾಧ್ಯ ಎಂದ ಅವರು, ಪಕ್ಷವು ರೈತ, ಮಹಿಳೆ, ಪರಿಸರ ಮತ್ತು ಯುವ ಜನ ಪ್ರಣಾಳಿಕೆ ಸಿದ್ದಪಡಿಸಿದ್ದು, ಅದನ್ನು ಜನರಿಗೆ ತಲುಪಿಸುವ ಕೆಲಸ ಮಾಡುವುದಾಗಿ ತಿಳಿಸಿದ ಅವರು, ವಿದ್ಯಾರ್ಥಿಗಳಿಗೆ 10ನೇ ತರಗತಿವರೆಗೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡಿಡುವುದಾಗಿ ಭರವಸೆ ನೀಡಿದರು.
ಸಾಲ ಮುಕ್ತ ರೈತ, ಬಡತನ ಮುಕ್ತ ಹಳ್ಳಿ, ಅಂತರ್ಜಲ ಮಟ್ಟ ಏರಿಕೆ, ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ, ತಾಲ್ಲೂಕಿಗೊಂದು ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ನಿರದ್ಯೋಗಿ ಪದವೀಧರರಿಗೆ ಮಾಸಾಶನ, ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಥಮ ಆದ್ಯತೆ ಸೇರಿದಂತೆ ಜನಪರ ರಾಜಕಾರಣ ಮಾಡುವುದಾಗಿ ಹೇಳಿದರು.
ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಂ.ಸಜೀರ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಲಂಚ ನೀಡಿದರೆ ಮಾತ್ರ ಉತ್ತಮ ಚಿಕಿತ್ಸೆ ಸಿಗುವ ವ್ಯವಸ್ಥೆ ಇದೆ. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಒಂದು ಸ್ಕ್ಯಾಯನಿಂಗ್ ಮಷಿನ್ ಇದ್ದು, ಬಡ ರೋಗಿಗಳಿಗೆ ಸಕಾಲದಲ್ಲಿ ಸ್ಪಂದನೆ ಸಿಗುತ್ತಿಲ್ಲ. ಇಂತಹ ವ್ಯವಸ್ಥೆ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಡೇನಿಯಲ್, ಎ.ಸಿ.ಮಂಜುನಾಥ್, ಕೆ.ಎನ್.ಮಹದೇವಣ್ಣ ಹಾಗೂ ನಿತೀಶ್ ಕುಮಾರ್ ಉಪಸ್ಥಿತರಿದ್ದರು.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*