ವಿರಾಜಪೇಟೆ ಜ.4 : ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಪರಿಶೀಲಿಸಿ ಶ್ರೇಯಾಂಕವನ್ನು ನೀಡುವ ಸಲುವಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗೆ ನ್ಯಾಕ್ ಸಂಸ್ಥೆಯ ಪದಾಧಿಕಾರಿಗಳು ಭೇಟಿ ನೀಡಿದರು.
ಎರಡು ದಿನಗಳ ಭೇಟಿಯ ಅಂಗವಾಗಿ ಮೂವರು ತಜ್ಞರನ್ನು ಒಳಗೊಂಡ ತಂಡವು ಆಗಮಿಸಿ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ.ಅವರು ಕಾಲೇಜಿನ ಸಮಗ್ರ ವಿವರಗಳನ್ನು ಒಳಗೊಂಡ ಪಿಪಿಟಿ ಯನ್ನು ಮಂಡನೆ ಮಾಡಿದರು. ಕಾಲೇಜಿನ ಐಕ್ಯೂಎಸಿ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ತಮ್ಮ ವಿಭಾಗದ ಕಳೆದ ಐದು ವರ್ಷದ ಚಟುವಟಿಕೆಗಳಿಗೆ ಸಂಬಂದಿಸಿದ ವಿಚಾರಗಳನ್ನು ಮಂಡಿಸಿದರು.
ನಂತರ ಕಾಲೇಜಿನಲ್ಲಿ ಇರುವ ಸೌಲಭ್ಯಗಳು ಮತ್ತು ಕಟ್ಟಡದ ಪರಿಶೀಲನೆ ನಡೆಸಿದ ತಂಡವು ಎಲ್ಲಾ ವಿಭಾಗಗಳಿಗೆ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ಮಾಡಿದರು. ನಂತರ ವಿದ್ಯಾರ್ಥಿ, ಹಳೆ ವಿದ್ಯಾರ್ಥಿ, ಅಧ್ಯಾಪಕರು ಮತ್ತು ಆಡಳಿತ ಸಿಬ್ಬಂದಿ ವರ್ಗದವರ ಜೊತೆ ಸಂವಾದ ನಡೆಸಿದರು.
ಇದೇ ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ವಿರಾಜಪೇಟೆಯ ಶಾಸಕ ಕೆ.ಜಿ.ಬೋಪಯ್ಯ ಆಗಮಿಸಿ ನ್ಯಾಕ್ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಮಾತನಾಡಿದರು.
ದಾಖಲಾತಿಗಳ ಪರಿಶೀಲನೆಯನ್ನು ನಡೆಸಿದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ರಾಷ್ಟ್ರಭಕ್ತಿ, ನಾಡ ಪ್ರೇಮ, ಕೊಡಗಿನ ಸಂಸ್ಕೃತಿ ಬಿಂಬಿಸುವ ನೃತ್ಯಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*