ಮಡಿಕೇರಿ ಜ.4 : ಪ್ರಸಕ್ತ(2022-23) ಸಾಲಿನಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ನೀಡಲಾಗುವುದು.
ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022 ರ ಜನವರಿ, 01 ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ 2022 ರ ಜನವರಿ, 01 ರಿಂದ ಡಿಸೆಂಬರ್, 31 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.
ಅರ್ಜಿಯನ್ನು ಕ್ರೀಡಾ ಇಲಾಖೆಯಿಂದ ಪಡೆದು 2023 ರ ಜನವರಿ, 25 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-229985 ಹಾಗೂ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*