ಮಡಿಕೇರಿ ಜ.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ವಿಕಸನ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಗೋಣಿಕೊಪ್ಪ ಲಯನ್ಸ್ ಸಂಸ್ಥೆ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.7ರಂದು 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ವಿಶೇಷ ತರಗತಿ ಏರ್ಪಡಿಸಲಾಗಿದೆ.
ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಡಿಡಿಪಿಐ ಸಿ. ರಂಗಧಾಮಯ್ಯ ಉದ್ಘಾಟಿಸಲಿದ್ದಾರೆ. ಮೋಟಿವೇಷನ್ ಗುರು ತೀತಮಾಡ ಅರ್ಜುನ್ ದೇವಯ್ಯ ಸ್ಫೂರ್ತಿಯ ಮಾತುಗಳನ್ನಾಡಲಿದ್ದಾರೆ. ಗೋಣಿಕೊಪ್ಪ ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಅಮ್ಮಂಡ ಚಿಣ್ಣಪ್ಪ, ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಬಿಇಒ ಶ್ರೀಶೈಲ ಬಿಳಗಿ, ಕೊಡಗು ವಿಕಸನ ಸಂಸ್ಥೆ ಸಂಸ್ಥಾಪಕ ಚೈಯ್ಯಂಡ ಸತ್ಯ ಗಣಪತಿ, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ, ಕೆ.ಕೆ. ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.