ಮಡಿಕೇರಿ ಜ.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಉದ್ಘಾಟನೆ, ಬೆಳ್ಳಿ ಮಹೋತ್ಸವ ಲಾಂಛನ ಅನಾವರಣ ಹಾಗೂ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ಜ.7ರಂದು ಗೋಣಿಕೊಪ್ಪ ಕಾಲ್ಸ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 9 ಗಂಟೆಗೆ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗೋಣಿಕೊಪ್ಪ ಕಾಲ್ಸ್ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ. ಪೂವಯ್ಯ ವಹಿಸಲಿದ್ದಾರೆ.
ವಿರಾಜಪೇಟೆ ಕ್ಷೇತ್ರದ ಶಾಸಕರೂ ಆಗಿರುವ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಬೆಳ್ಳಿ ಮಹೋತ್ಸವ ಉದ್ಘಾಟಿಸಲಿದ್ದಾರೆ. ಅಂತಾರಾಷ್ಟ್ರೀಯ ಅಥ್ಲೆಟ್ ತೀತಮಾಡ ಅರ್ಜುನ್ ದೇವಯ್ಯ ಲಾಂಛನ ಅನಾವರಣ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸುತ್ತಾರೆ.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕಾಲ್ಸ್ ವಿದ್ಯಾ ಸಂಸ್ಥೆ ಪ್ರಾಂಶುಪಾಲರಾದ ಬಾಚೇಟೀರ ಗೌರಮ್ಮ ನಂಜಪ್ಪ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*