Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ವಿವಿಧ ಯೋಜನೆಗೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು

ವಿವಿಧ ಯೋಜನೆಗೆ ಅರ್ಜಿ ಆಹ್ವಾನ

January 5, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.5 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಒದಗಿಸಿದ ಪೂರಕ ಆಯವ್ಯಯದ ಅನುದಾನದಲ್ಲಿ ಡಿ.ದೇರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಈ ಯೋಜನೆಯ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಳ್ಳ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರಗಳು, ಪಟ್ಟಣ ಪ್ರದೇಶದವರಿಗೆ ರೂ.1,20,000 ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು(ಶ್ರೀ/ಶ್ರೀಮತಿ,ಕುಮಾರಿ ಮುಂತಾದ ಮಾಹಿತಿಗಳೆಲ್ಲವೂ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.
ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಅರ್ಹತೆ ಹೊಂದಿರಬೇಕು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿ/ ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಖುಷ್ಕಿಯಾಗಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು. ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ 1.20 ಲಕ್ಷ ರೂ ಗಳ ಒಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 01 ಎಕರೆ ಜಮೀನು ಹೊಂದಿರಬೇಕು. ವೈಯುಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ. 2.50 ಲಕ್ಷಗಳು. ಇದರಲ್ಲಿ ರೂ.2 ಲಕ್ಷ ಸಹಾಯಧನ ಹಾಗೂ ರೂ.50 ಸಾವಿರ ನಿಗದಿಂದ ಶೇ.4ರ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿರುವಂತೆ ರೈತರ ಹೆಸರು(ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು. ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂದು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿಸಲ್ಲಿಸಲು ಅರ್ಹರಿರುವುದಿಲ್ಲ. ಈಗಾಗಲೇ 2022-23 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನ: ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ, 17 ಕೊನೆಯ ದಿನವಾಗಿದೆ. ಹಾಗೂ ನಿಗಮದ ವೆಬ್‍ಸೈಟ್https://www.dbcdc.karnataka.gov.in  ಅಥವಾ ನಿಗಮದ ಕೇಂದ್ರ ಕಚೇರಿ ದೂರವಾಣಿ, ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004 ಮತ್ತು 6, 7090400100, 7090400900 ಅಥವಾ ಕಚೇರಿ ವೇಳೆಯಲ್ಲಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಡಿಕೇರಿ ದೂರವಾಣಿ ಸಂಖ್ಯೆ: 08272-221656 ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleವಿಶೇಷಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Next Article ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.