ಮಡಿಕೇರಿ ಜ.5 : ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಜ.6 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಜನವರಿ, 06 ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರ ಬಳಿಯ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನೀಯರ ‘ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 12.30 ಗಂಟೆಗೆ ಬೈಚನಹಳ್ಳಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.












