ಮಡಿಕೇರಿ ಜ.5 : ಜಿಲ್ಲಾ ದಿವ್ಯಾಂಗರ ಒಕ್ಕೂಟ ಹಾಗೂ ಮಡಿಕೇರಿ ನಗರಸಭೆ ಸಂಯುಕ್ತಾಶ್ರಯದಲ್ಲಿ ದಿವ್ಯಾಂಗರ ದಿನಾಚರಣೆ ಹಾಗೂ ದಿವ್ಯಾಂಗರ ಕುಂದುಕೊರತೆ ಸಭೆ ನಡೆಯಿತು.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಪೌರಾಯುಕ್ತ ವಿಜಯ, ಜಿ.ಪಂ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಡಾ.ಆಕಾಶ್, ಜಿಲ್ಲಾ ದಿವ್ಯಾಂಗರ ಒಕ್ಕೂಟದ ಅಧ್ಯಕ್ಷೆ ಎನ್.ಕೆ.ಈಶ್ವರಿ, ಉಪನಿರ್ದೇಶಕ ಮಂಜುನಾಥ್, ವಿಕಲಚೇತನ ಕಲ್ಯಾಣ ಅಧಿಕಾರಿ ವಿಮಲಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ವೆಂಕಟೇಶ್, ವೈದ್ಯಧಿಕಾರಿ ಡಾ.ರೂಪೇಶ್, ಸಮಾಜ ಸೇವಕರಾದ ತೇಲಪಂಡ ಶಿವಕುಮಾರ್ ನಾಣಯ್ಯ, ಪ್ರಮುಖರಾದ ರವಿಗೌಡ ಮತ್ತಿತರರು ಹಾಜರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಸಂಘದ ಪದಾಧಿಕಾರಿ ಆಯಿಷಾ ಮಾಡಿದರು. ಮೀನಕುಮಾರಿ ಸ್ವಾಗತಿಸಿ, ಲೋಹಿತ್ ಗೌಡ ಸರ್ವರನ್ನು ವಂದಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ದಿವ್ಯಾಂಗರನ್ನು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ನಂತರ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ದಿವ್ಯಾಂಗರ ಕುಂದುಕೊರತೆ ಸಭೆ ನಡೆಯಿತು. ಸಮಾಜ ಸೇವಕ ಡಾ.ಮಂಥರ್ ಗೌಡ ಊಟದ ವ್ಯವಸ್ಥೆಯನ್ನು ಕಲ್ಪಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*