ಕುಶಾಲನಗರ ಜ.5 : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲು ವಿಜ್ಞಾನ ಮೇಳಗಳು ಪೂರಕವಾಗಿವೆ ಎಂದು ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಗೀತಾ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಫಾತಿಮ ಕಾನ್ವೆಂಟ್ ಶಾಲೆಯಲ್ಲಿ ನಡೆದ ವಿಜ್ಞಾನ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆ ಹೊರತರಲು ಇಂತಹ ವಿಜ್ಞಾನ ಮೇಳ ಆಯೋಜಿಸುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ವಿಜ್ಞಾನಮೇಳ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿತುಂಬಲು ಸಾಧ್ಯ ಎಂದರು.
ಫಾತೀಮಾ ಕಾನ್ವೆಂಟ್ ಶಾಲೆಯ ವ್ಯವಸ್ಥಾಪಕರಾದ ಸಿಸ್ಟರ್ ಸ್ಪಂದನ ಮಾತನಾಡಿ, ಮಕ್ಕಳಲ್ಲಿ ಚಿಕ್ಕಂದಿನಲ್ಲಿಯೇ ವಿಜ್ಞಾನ ಚಿಂತನೆಗಳನ್ನು ಮೂಡಿಸುವಂತದ್ದು ಅವಶ್ಯಕತೆ ಇದೆ.ಪಠ್ಯದ ಜೊತೆಗೆ ಪ್ರಾಯೋಗಿಕವಾಗಿ ಜ್ಞಾನದೊರೆಯಲು ವಿಜ್ಞಾನ ಮೇಳ ಮಕ್ಕಳ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ. ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿ ವೈಜ್ಞಾನಿಕವಾಗಿ ಮಕ್ಕಳಲ್ಲಿ ಹೆಚ್ಚಿನ ಜ್ಞಾನ ಮೂಡಿಸಲು ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದರು.
ಇದೇ ಸಂದರ್ಭ ವಿದ್ಯಾರ್ಥಿಗಳು ತಯಾರಿಸಿಕೊಂಡು ಬಂದ ವಿಜ್ಞಾನ ವಸ್ತುಗಳ ಮಾದರಿ ಪ್ರದರ್ಶಿಸಿ, ಅವುಗಳ ಬಗ್ಗೆ ವಿವರಣೆ ನೀಡಿದರು.
ಫಾತಿಮ ಕಾನ್ವೆಂಟ್ ಶಾಲೆಯ ಡಾ.ಸಿಸ್ಟರ್ ಜೆಸ್ವಿನಾ, ಸಿಸ್ಟರ್ ತೆರೇಸ್ ಮತ್ತಿತರರು ಇದ್ದರು.












