ಮಡಿಕೇರಿ ಜ.6 : ಜಿಲ್ಲಾ ಬಿಜೆಪಿ ಹಾಗೂ ಮಡಿಕೇರಿ ನಗರ ಬಿಜೆಪಿ ವತಿಯಿಂದ ನಗರದ ರಾಜರಾಜೇಶ್ವರಿ ನಗರ ಉಕ್ಕಡ ಭಾಗದಲ್ಲಿ ಬೂತ್ ಅಭಿಯಾನ ನಡೆಯಿತು.
ಈ ಸಂದರ್ಭ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮೇಲೆ ಪಕ್ಷದ ಧ್ವಜ ಹಾರಿಸಿದರು.
ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಸದಸ್ಯ ಎಸ್.ಸಿ.ಸತೀಶ್, ಪ್ರಮುಖರಾದ ಅರುಣ್ ಕುಮಾರ್ ಮತ್ತಿತರ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.