ಸೋಮವಾರಪೇಟೆ ಜ.6 : ಕಾಯಕಯೋಗಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಜ.9ರಂದು ಪಟ್ಟಣದ ಆನೆಕೆರೆ ಸಮೀಪ ನಿರ್ಮಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಮಹೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9ಗಂಟೆಗೆ ಜೇಸಿ ವೇದಿಕೆಯಿಂದ ವಿವಿಧ ಕಲಾ ತಂಡಗಳೊಂದಿಗೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಮೆರವಣಿಗೆ ನಡೆಯಲಿದೆ. 111 ಪೂರ್ಣಕುಂಭ ಕಳಸ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಸಾಗಲಿದ್ದಾರೆ. 10ಗಂಟೆಗೆ ತಂಗುದಾಣ ಉದ್ಘಾಟನೆ ಹಾಗೂ 11ಗಂಟೆಗೆ ಸಾಕ್ಷಿ ಕನ್ವೆನ್ಷನ್ ಹಾಲ್‍ನಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ತುಮಕೂರು, ಶ್ರೀ ಸಿದ್ದಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯಸಾನಿದ್ಯ ವಹಿಸಲಿದ್ದಾರೆ.
ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠದ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಮಹಾಂತ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಬಸವಪಟ್ಟಣ ತೊಂಟದಾರ್ಯ ಸಂಸ್ಥಾನಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ತೊರೆನೂರು ವಿರಕ್ತಮಠದ ಮಲ್ಲೇಶ ಸ್ವಾಮೀಜಿ, ಅಂಕನಳ್ಳಿ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಮಾದ್ರೆ ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕೆಸವತ್ತೂರು ಮಠದ ಬಸವರಾಜೇಂದ್ರ ಸ್ವಾಮೀಜಿ, ರಾವಂದೂರು ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ, ಅರಕಲಗೂಡು ಚಿಲುಮೆ ಮಠದ ಶ್ರೀ ಜಯದೇವ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ರುದ್ರಮುನಿ ಸ್ವಾಮೀಜಿ, ಚಿಕ್ಕಬಳ್ಳಪುರ ಶ್ರೀ ನಿಶ್ಚಲದೇಶಿಕೇಂದ್ರ ಸ್ವಾಮೀಜಿ, ಸೋಮವಾರಪೇಟೆಯ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಭಾಗವಹಿಸಲಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್, ಸಂಸದ ಪ್ರತಾಪ್‍ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಸುಜಾ ಕುಶಾಲಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರ, ಉಪಾಧ್ಯಕ್ಷ ಬಿ.ಸಂಜೀವ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಎಚ್. ರೋಹಿತ್ ಉಪಸ್ಥಿತರಿರುವರು.
ಸುದ್ದಿಗೋಷ್ಠಿಯಲ್ಲಿ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಶ್ರೀ ಸದಾಶಿವ ಸ್ವಾಮೀಜಿ, ಸಮಿತಿಯ ಕಾರ್ಯದರ್ಶಿ ಬಿ.ಆರ್.ಮೃತ್ಯುಂಜಯ, ಪದಾಧಿಕಾರಿ ಬಿ.ಪಿ.ಶಿವಕುಮಾರ್ ಉಪಸ್ಥಿತರಿದ್ದರು.