ಮಡಿಕೇರಿ ಜ.6 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡು ಅರ್ಹ ನಾಗರಿಕರನ್ನು ಮತ್ತು ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲು 2022 ರ ನವೆಂಬರ್, 09 ರಿಂದ 2022 ರ ಡಿಸೆಂಬರ್, 08 ರವರೆಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸ್ವೀಕರಿಸಲಾಗಿದೆ.
ಹಾಗೆಯೇ 2022 ರ ನವೆಂಬರ್, 12, ನವೆಂಬರ್, 20, ಡಿಸೆಂಬರ್, 03 ಮತ್ತು ಡಿಸೆಂಬರ್, 04 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು 2023 ರ ಜನವರಿ, 05 ರಂದು ಎಲ್ಲಾ ಮತಗಟ್ಟೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.in ರಲ್ಲಿ ಪ್ರಕಟಿಸಲಾಗಿದೆ.
ಪ್ರಸ್ತುತ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 4,44,098 ಮತದಾರರು ಇದ್ದು, 208-ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,25,910 ಮತದಾರರು ಹಾಗೂ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,18,188 ಮತದಾರರು ಇದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಕಾಲೇಜುಗಳಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ, 18-19 ವರ್ಷದ ಒಟ್ಟು 3,747 ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲಾಗಿದೆ.
ಜಿಲ್ಲೆಯಲ್ಲಿರುವ 250 ಹಾಡಿಗಳ ಪೈಕಿ ಜನವಸತಿ ಇರುವ 76 ಹಾಡಿಗಳಲ್ಲಿ ವಾಸವಿರುವ ಜೇನುಕುರುಬ ಸಮುದಾಯದ ಜನಾಂಗದವರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಸಹಯೋಗದೊಂದಿಗೆ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಿ, ಈ ತಂಡವು ಪ್ರತಿಯೊಂದು ಹಾಡಿಗಳಿಗೂ ಭೇಟಿ ನೀಡಿ, ಒಟ್ಟು 1002 ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲಾಗಿದೆ.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ ಮತದಾರರು https://www.nvsp.in, https://voterportal.eci.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಮತ್ತು ವಿಎಚ್‍ಎ ಮೊಬೈಲ್ ಆಪ್ ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*