Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ವಸತಿ ಶಾಲೆ : 50 ರಿಂದ 100 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಇತ್ತೀಚಿನ ಸುದ್ದಿಗಳು

ವಸತಿ ಶಾಲೆ : 50 ರಿಂದ 100 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ : ಸಚಿವ ಕೋಟ ಶ್ರೀನಿವಾಸ ಪೂಜಾರಿ

January 6, 20234 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.6 : ರಾಜ್ಯದಲ್ಲಿ ವಸತಿ ಶಾಲೆಗಳ ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಉತ್ತಮವಾಗಿದ್ದು, ಬೇಡಿಕೆಯೂ ಸಹ ಹೆಚ್ಚಿದೆ. ಈ ಹಿನ್ನೆಲೆ ಮುಂದಿನ ಶೈಕ್ಷಣಿಕ ವರ್ಷದಿಂದ 6 ನೇ ತರಗತಿಗೆ 50 ರಿಂದ 100 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ಅಂಬೇಡ್ಕರ್, ಮೊರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ, ನಾರಾಯಣ ಗುರು ಹೀಗೆ ಒಟ್ಟು 830 ವಸತಿ ಶಾಲೆಗಳಿದ್ದು, 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಸತಿ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಫಲಿತಾಂಶ ಉತ್ತಮವಾಗಿದ್ದು, ರಾಜ್ಯದಾದ್ಯಂತ ಬೇಡಿಕೆ ಹೆಚ್ಚಿದೆ. ಆದ್ದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ 6 ನೇ ತರಗತಿ ಪ್ರವೇಶಕ್ಕೆ ‘ಎ’ ಮತ್ತು ‘ಬಿ’ ವಿಭಾಗ ಮಾಡಿ 50 ರಿಂದ 100 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಮಾಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲೆಮಾರಿಗಳ ಹೀಗೆ ಎಲ್ಲಾ ಬಡ ಗ್ರಾಮೀಣ ವಿದ್ಯಾರ್ಥಿಗಳು ವಸತಿ ಶಾಲೆಗೆ ಸೇರಿ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದು, ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ವಸತಿ ಶಾಲೆಗಳನ್ನು ಆರಂಬಿಸಿದೆ. ಆ ನಿಟ್ಟಿನಲ್ಲಿ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತಾಗಬೇಕು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನುಡಿದರು.
ರಾಜ್ಯದ ವಿವಿಧ ವಸತಿ ಶಾಲೆಯಲ್ಲಿ ಓದಿದ 14 ವಿದ್ಯಾರ್ಥಿಗಳು ಭಾರತೀಯ ತಾಂತ್ರಿಕ ಸಂಸ್ಥೆ(ಐಐಟಿ) ಗೆ ಆಯ್ಕೆಯಾಗಿದ್ದಾರೆ. ಇದೊಂದು ವಿಶೇಷ ಎಂದರು ಅತಿಶಯೋಕ್ತಿಯಲ್ಲ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.
ಶೇ.25 ರಷ್ಟಾದರೂ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಜನೆಗೆ ಅವಕಾಶ ಮಾಡಬೇಕು ಎಂದು ಸರ್ಕಾರದ ಆಶಯವಾಗಿದ್ದು, ಆ ನಿಟ್ಟಿನಲ್ಲಿ ವಸತಿ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಿದವರಿಗೆ ಸಾಧ್ಯವಾದಷ್ಟು ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ ಮಾಡಲಾಗುವುದು ಎಂದು ಸಚಿವರು ಹೇಳಿದರು.
ವಸತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರುಗುತ್ತಿಗೆ ಶಿಕ್ಷಕರಿಗೆ ಸೇವಾ ಭದ್ರತೆ ನೀಡಲಾಗುವುದು. ಹಾಗೆಯೇ ಶಿಕ್ಷಕರಿಗೆ ಗೌರವಧನ ಹೆಚ್ಚಿಸಲಾಗುವುದು. ಆ ನಿಟ್ಟಿನಲ್ಲಿ 18 ಕೋಟಿ ರೂ. ವೆಚ್ಚವಾಗಲಿದೆ. ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲು ಮುಂದಾಗಲಾಗಿದೆ ಎಂದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನೇಕ ಸವಾಲುಗಳಿದ್ದು, ಅದನ್ನು ಎದುರಿಸುವ ನಿಟ್ಟಿನಲ್ಲಿ ದೃಢವಾದ ಹೆಜ್ಜೆ ಇಡಲಾಗಿದೆ. ರಾಜ್ಯದಲ್ಲಿ ವಿದ್ಯಾರ್ಥಿ ನಿಲಯ ಪರಿಕಲ್ಪನೆಯನ್ನು ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೊಳಿಸಿದರು ಎಂದು ಸ್ಮರಿಸಿದರು.
‘ರಾಜ್ಯದಲ್ಲಿ ಇನ್ನೂ 1.20 ಲಕ್ಷ ಮಕ್ಕಳು ವಿದ್ಯಾರ್ಥಿ ನಿಲಯದಿಂದ ಹೊರಗಿದ್ದಾರೆ. ಎಲ್ಲರಿಗೂ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದರು.’
ವಿದ್ಯಾರ್ಥಿ ನಿಲಯಗಳ ಮೂಲ ಸೌಕರ್ಯಕ್ಕೆ 135 ಕೋಟಿ ರೂ.ಬೇಕಿದ್ದು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ. ಸರ್ಕಾರ ಎಲ್ಲಾ ರೀತಿಯ ಆರ್ಥಿಕ ನೆರವು ನೀಡಲಿದೆ. 50 ಕಡೆಗಳಲ್ಲಿ ಕನಕದಾಸರ ಹೆಸರಿನಲ್ಲಿ ವಿದ್ಯಾರ್ಥಿ ನಿಲಯ, ಹಾಗೆಯೇ 5 ಕಡೆಗಳಲ್ಲಿ(ಮಂಗಳೂರು, ಬೆಳಗಾವಿ, ಗುಲ್ಬರ್ಗಾ, ಮೈಸೂರು, ಬೆಂಗಳೂರು) ದೀನ್ ದಯಾಳ್ ಉಪಾಧ್ಯಾಯ ವಿದ್ಯಾರ್ಥಿ ನಿಲಯದಲ್ಲಿ ಒಂದು ಸಾವಿರ ಮಕ್ಕಳಿಗೆ ಅವಕಾಶ ಕಲ್ಪಿಸಲಾಗುವುದು. ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ ಬೇಕು ಎನ್ನುವ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರವೇಶಕ್ಕೆ ಅವಕಾಶ ಒದಗಿಸಲಾಗುವುದು ಎಂದರು.
‘ಬಡವರ ಮಕ್ಕಳು ಮೇಲೆ ಬರುವಂತಾಗಲು ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ರಾಷ್ಟ್ರದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಂತಾಬೇಕು ಎಂದು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.’

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ‘ಓಬವ್ವ ಆತ್ಮ ರಕ್ಷಣೆ ಕಲೆ’ ಕಲಿಯುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸಮಾಜದಲ್ಲಿ ಧೈರ್ಯವಾಗಿ ಬದುಕಲು ಸಾಧ್ಯ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಮಾತನಾಡಿ ವಿದ್ಯಾರ್ಥಿನೀಯರು ಕರಾಟೆ ಕಲಿಯುವುದರಿಂದ ಆತ್ಮರಕ್ಷಣೆಯಿಂದ ಓಡಾಡಲು ಸಹಕಾರಿಯಾಗಲಿದೆ ಎಂದರು.
ಕೂಡು ಮಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಇಂದಿರಾ ರಮೇಶ್ ಅವರು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎನ್.ಮಂಜುನಾಥ್, ವಸತಿ ಶಾಲೆಗಳ ಜಿಲ್ಲಾ ಸಮನ್ವಯಾಧಿಕಾರಿ ಲೋಕೇಶ್, ವಿವಿಧ ವಸತಿ ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ ರೆಡ್ಡಿ, ಪ್ರಕಾಶ್, ಶ್ರೀದೇವಿ, ಭಾರತಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ವಿಸ್ತರಣಾಧಿಕಾರಿಯಾದ ಚಂದ್ರಪ್ಪ, ಎಂಜಿನಿಯರ್ ಚೆನ್ನೇಸ್, ಇತರರು ಇದ್ದರು. ವಿದ್ಯಾರ್ಥಿನಿಯರು ‘ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನ ಮಾಡಿದರು.
ಇನ್ನಷ್ಟು ಮಾಹಿತಿ: ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ದೌರ್ಜನ್ಯ ತಡೆಯುವ ಹಿನ್ನೆಲೆ ಸರ್ಕಾರವು ಹೆಣ್ಣು ಮಕ್ಕಳ ಸುರಕ್ಷತೆಗೆ ಅನೇಕ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದೆ.
ಪ್ರತಿಕೂಲ ಸನ್ನಿವೇಶಗಳಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ತಾವು ರಕ್ಷಿಸಿಕೊಳ್ಳುವಷ್ಟು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢ ಹಾಗೂ ಸಮರ್ಥರಾಗಿರುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ. ಈ ರೀತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢ ಮತ್ತು ಸಮರ್ಥರಾಗಲು ಇವರಿಗೆ ಆತ್ಮ ರಕ್ಷಣಾ ಕಲೆಗಳಾದ ಕರಾಟೆ, ಜೂಡೋ, ಟೆಕ್ವಾಂಡೋಗಳಲ್ಲಿ ಪರಿಣತಿ ಹೊಂದುವುದು ಅವಶ್ಯಕವಾಗಿದೆ. ಈ ಕಲೆಗಳಲ್ಲಿ ಅವರು ಪರಿಣತಿ ಪಡೆದರೆ ಯಾವುದೇ ಪ್ರತಿಕೂಲ ಸನ್ನಿವೇಶಗಳಲ್ಲಿ ಧೈರ್ಯದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಹಾಯವಾಗುತ್ತದೆ.
ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧೀನದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿನಿಯರಲ್ಲಿ ಆತ್ಮ ವಿಶ್ವಾಸ ಮೂಡಿಸಲು ಹಾಗೂ ಸ್ವಯಂ ರಕ್ಷಣೆಗಾಗಿ ಕರಾಟೆ/ ಜೂಡೋ/ ಟೆಕ್ವಾಂಡೋ ತರಬೇತಿಯನ್ನು ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ವೀರ ವನಿತೆ ‘ಒನಕೆ ಓಬವ್ವ’ ಇವರ ಹೆಸರಿನಲ್ಲಿ ‘ಓಬವ್ವ ಆತ್ಮ ರಕ್ಷಣಾ ಕಲೆ’ ತರಬೇತಿ ನೀಡಲಾಗುತ್ತಿದೆ.
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ವಸತಿ ಶಾಲೆಗಳಲ್ಲಿನ 2 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಸಲಾಗುತ್ತಿದೆ.
ತರಬೇತಿಯನ್ನು ಪ್ರತಿ ವಾರದ 2 ದಿನಗಳಲ್ಲಿ ಪ್ರತಿ ಅವಧಿಗೆ ಕನಿಷ್ಠ 45 ರಿಂದ 50 ನಿಮಿಷಗಳ ಸಮಯ ನಿಗಧಿಪಡಿಸಿ, ಒಟ್ಟು 6 ತಿಂಗಳಿಗೆ 48 ಬೋಧನಾ ಅವಧಿಗಳಿಗೆ ಮಾನ್ಯತೆ ಹೊಂದಿದ ಸಂಸ್ಥೆಯ ನಿಗಧಿತ ಮತ್ತು ಅರ್ಹ ಬ್ಲಾಕ್ ಬೆಲ್ಟ್ ಹೊಂದಿದ ಮಹಿಳಾ ತರಬೇತುದಾರರ ಮೂಲ ಸ್ವಯಂ ರಕ್ಷಣಾ ಕೌಶಲ್ಯಗಳ ಕರಾಟೆ ತರಬೇತಿ ನೀಡಲಾಗುತ್ತಿದೆ.
2021-22 ನೇ ಸಾಲಿನಲ್ಲಿ ನೀಡಿದ ಕರಾಟೆ ತರಬೇತಿಯಲ್ಲಿ ವಿದ್ಯಾರ್ಥಿನಿಯರು ಅತ್ಯುತ್ಸಾಹದಿಂದ ಭಾಗವಹಿಸಿ ಉತ್ತಮ ಸ್ಪಂದನೆ ಕಂಡುಬಂದಿದ್ದರಿಂದ 2022-23 ನೇ ಸಾಲಿನಲ್ಲಿಯೂ ಇತರೆ ಶಾಲೆಗಳ ವಿದ್ಯಾರ್ಥಿ ನಿಯರಿಗೆ ಕರಾಟೆ ತರಬೇತಿ ನೀಡಲು ತೀರ್ಮಾನಿಸಲಾಗಿದೆ.
2022-23 ನೇ ಸಾಲಿನಲ್ಲಿ 792 ವಸತಿ ಶಾಲೆಗಳ 7, 8 ಮತ್ತು 9 ನೇ ತರಗತಿಯ 75,480 ವಿದ್ಯಾರ್ಥಿನಿಯರಿಗೆ ರೂ.930.55 ಲಕ್ಷ ವೆಚ್ಚದಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ.
2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 920 ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿನ 85,713 ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುತ್ತಿದೆ.
2022-23 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ 303 ಮೆಟ್ರಿಕ್ ಪೂರ್ವ ಬಾಲಕಿರಯ ವಿದ್ಯಾರ್ಥಿ ನಿಲಯಗಳಲ್ಲಿನ 17,564 ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಹಿತಿ ನೀಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
Next Article ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಸಿಎನ್‍ಸಿ ಧರಣಿ : ಕೊಡವ ತಾಯ್ನಾಡು ಮತ್ತು ಕೊಡವರ ಭಾವನೆಗಳನ್ನು ಗೌರವಿಸಲು ಒತ್ತಾಯ

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.