ಮಡಿಕೇರಿ ಜ.6 : ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿರುವ ಪ್ರಕರಣ ದಾಖಲಾಗಿದೆ.
ಸ್ಥಳೀಯ ವ್ಯಾಪಾರಿ ನಾರಾಯಣ ಎಂಬುವವರ ಮನೆಗೆ ನುಗ್ಗಿದ ಕಳ್ಳರು 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 13 ಸಾವಿರ ರೂ. ನಗದನ್ನು ದೋಚಿದ್ದಾರೆ ಎಂದು ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಥಳಕ್ಕೆ ಕುಶಾಲನಗರ ಡಿವೈಎಸ್‌ಪಿ ಆರ್.ವಿಗಂಗಾಧರಪ್ಪ, ವೃತ್ತ ನಿರೀಕ್ಷಕ ಮಹೇಶ್, ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚುಗಾರರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.












