ಮಡಿಕೇರಿ ಜ.6 : ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು “ಸೂರ್ಯ ನಮಸ್ಕಾರ ಚಾಲೆಂಜ್” ಸ್ಪರ್ಧೆ ನಡೆಯಲಿದೆ.
ಕೈಕೇರಿಯ ಶ್ರೀ ಭಗವತಿ ದೇವಾಲಯದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಸ್ಪರ್ಧೆಯನ್ನು ಗೋಣಿಕೊಪ್ಪಲುವಿನ ಉದ್ಯಮಿ ಜಿ.ಲಕ್ಷ್ಮೀ ರೆಡ್ಡಿ ಉದ್ಘಾಟಿಸಲಿದ್ದಾರೆ.
ಅಪರಾಹ್ನ 12 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷರಾದ ಸೌಮ್ಯ ಬಾಲು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಉಮಾಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್, ಅಂತರಾಷ್ಟ್ರೀಯ ಯೋಗ ಪಟು ಅಮೃತ್ ರಾಕೇಶ್, ಹಾತೂರು ಗ್ರಾ.ಪಂ ಅಧ್ಯಕ್ಷ ಗುಮ್ಮಟ್ಟೀರ ದರ್ಶನ್ ನಂಜಪ್ಪ, ನ್ಯಾಷನಲ್ ಅಕಾಡೆಮಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶಾಂತಿ ಅಚ್ಚಪ್ಪ, ಪೊನ್ನಂಪೇಟೆ ನಾಗರೀಕ ವೇದಿಕೆ ಮಾಜಿ ಅಧ್ಯಕ್ಷ ಪೋಕುಳಚಂಡ ಬಿ.ಪೂಣಚ್ಚ ಪಾಲ್ಗೊಳ್ಳಲಿದ್ದಾರೆ.
ಆಹ್ವಾನಿತರಾಗಿ ಶ್ರೀ ಧರ್ಮಸ್ಥಳ ಸೇವಾ ಸಂಘದ ಪ್ರಮುಖರಾದ ನರಸಿಂಹ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಚಾಲಕ ಚಕ್ಕೇರ ಮನು ಕಾವೇರಪ್ಪ, ಕರ್ನಾಟಕ ಬ್ಯಾಂಕ್ ಸೇವಾನಿರತರು ಹಾಗೂ ಪತಂಜಲಿ ಯೋಗ ಕೇಂದ್ರದ ಯೋಗ ಶಿಕ್ಷಕ ಗುರುರಂಗಯ್ಯ ಬಲ್ಲಾಳ್, ಉದ್ಯಮಿ ಶೇಖರ್ ಭಂಡಾರಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಯೋಗಪಟು ಅಮೃತ್ ರಾಕೇಶ್, ಪೊನ್ನಂಪೇಟೆ ನಾಗರೀಕ ವೇದಿಕೆ ಮಾಜಿ ಅಧ್ಯಕ್ಷ ಪೋಕುಳಚಂಡ ಬಿ.ಪೂಣಚ್ಚ, ಹಾಗೂ ಪ್ರಮುಖರಾದ ಜಿ.ಸುಭಾಷಿಣಿ ರೆಡ್ಡಿ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು.
ಸ್ಪರ್ಧೆಯ ವಿಜೇತರಿಗೆ ಗೋಣಿಕೊಪ್ಪ ಉಮಾಮಹೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಡಾ.ಕೆ.ಎನ್.ಚಂದ್ರಶೇಖರ್ ಬಹುಮಾನ ವಿತರಣೆ ಮಾಡಲಿದ್ದಾರೆ.
ಸಂಪೂರ್ಣ ಸ್ವಾಸ್ವ್ಥ್ಯ ಯೋಗ ಕೇಂದ್ರದ ಗೋಣಿಕೊಪ್ಪಲಿನಲ್ಲಿ ಹಲವು ತಿಂಗಳಿನಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದು, ಇದು ವರ್ಷ ಕಾಲಾವಧಿಯನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆ “ಸೂರ್ಯ ನಮಸ್ಕಾರ ಚಾಲೆಂಜ್” ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪ್ರಥಮ ಬಹುಮಾನ ರೂ.30 ಸಾವಿರ ನಗದು, ಆಕರ್ಷಕ ಟ್ರೋಫಿ ಮತ್ತು ಪ್ರಮಾಣ ಪತ್ರ, ದ್ವಿತೀಯ ರೂ.15 ಸಾವಿರ ನಗದು, ಆಕರ್ಷಕ ಟ್ರೋಫಿ ಮತ್ತು ಪ್ರಮಾಣ ಪತ್ರ, ತೃತೀಯ ರೂ.5 ಸಾವಿರ ನಗದು, ಆಕರ್ಷಕ ಟ್ರೋಫಿ ಮತ್ತು ಪ್ರಮಾಣಪತ್ರ ನೀಡಲಾಗುವುದು. ಅಲ್ಲದೆ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಯೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ನಿರಂತರ ಅಭ್ಯಾಸದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದರ ಜೊತೆಗೆ ಸ್ಪರ್ಧಾ ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಇದೊಂದು ವಿನೂತನ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಹೇಳಿದ್ದಾರೆ.
ವಯಸ್ಸು ಮತ್ತು ಲಿಂಗದ ತಾರತಮ್ಯವಿಲ್ಲದೆ ಎಲ್ಲಾ ವರ್ಗ ಮತ್ತು ಲಿಂಗದವರು ಮುಕ್ತವಾಗಿ ಭಾಗವಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು 7009865119, 7558540801 ನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*