ಮಡಿಕೇರಿ ಜ.7 : ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗ ಬಾಂಧವರ ನಡುವೆ ಕೊಡಗು ಗೌಡ ಯುವ ವೇದಿಕೆ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರಲಾಗುತ್ತಿರುವ ಟೆನ್ನಿಸ್ ಬಾಲ್ ಕ್ರಿಕೆಟ್ ಹಬ್ಬವನ್ನು ಈ ಬಾರಿಯೂ ಏಪ್ರಿಲ್ ಕೊನೆಯ ವಾರ ಹಾಗೂ ಮೇ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅಧ್ಯಕ್ಷತೆಯಲ್ಲಿ ವೇದಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕಳೆದ ಎರಡು ವರ್ಷಗಳಿಂದ ಯುವ ವೇದಿಕೆ ವತಿಯಿಂದಲೇ `ಕುಟುಂಬ’ ಹೆಸರಿನಲ್ಲಿ ಪಂದ್ಯಾವಳಿ ಆಯೋಜನೆ ಮಾಡಿಕೊಂಡು ಬರಲಾಗುತ್ತಿದ್ದು, ಈ ಬಾರಿಯೂ ಕೂಡ `ಕುಟುಂಬ-2023′ ಹೆಸರಿನಲ್ಲಿ ಕ್ರಿಕೆಟ್ ಹಬ್ಬ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.
ಕ್ರಿಕೆಟ್ ಪಂದ್ಯಾವಳಿಯೊಂದಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟಗಳನ್ನು ಕೂಡ ಆಯೋಜನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ಕಟ್ಟೆಮನೆ ರೋಶನ್, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್, ಆಹಾರ ಸಮಿತಿ ಅಧ್ಯಕ್ಷ ಪರಿಚನ ಸತೀಶ್, ಶಿಸ್ತು ಸಮಿತಿ ಅಧ್ಯಕ್ಷ ಪೊಕ್ಕುಳಂಡ್ರ ಮನೋಜ್, ಕ್ರಿಯಾ ಸಮಿತಿಯ ಪುದಿಯನೆರವನ ರಿಶಿತ್, ನಿರ್ದೇಶಕರುಗಳಾದ ಮೂಲೆಮಜಲು ಮನೋಜ್, ದಂಬೆಕೋಡಿ ಗಯಾ, ಕೋಚನ ಅನೂಪ್, ಇತರರು ಹಾಜರಿದ್ದರು.