ಮಡಿಕೇರಿ ಜ.7 : ಪ್ರಸಕ್ತ (2022-23) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ, 20 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ http://shp.karnataka.gov.in ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ ರೂ.1.00 ಲಕ್ಷ ಆಗಿದೆ.
ಹೆಚ್ಚಿನ ಮಾಹಿತಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ: 8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ :9844531040, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ: 9481772143 ನ್ನು ಕಚೇರಿ ವೇಳೆಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ವಿಳಾಸ: www.bcwd.karnataka.gov.in ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
Breaking News
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*