ಮಡಿಕೇರಿ ಜ.7 : ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಾಡಿದ್ದು, 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಕೋರಿದ್ದಾರೆ.
ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನವೋದಯ ವಿದ್ಯಾಲಯವು ಸರ್ಕಾರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದೆ. ಆದ್ದರಿಂದ ಈ ಪರೀಕ್ಷೆ ಬರೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ. ಈ ಅವಕಾಶವನ್ನು 5ನೇ ತರಗತಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಬಳಸಿಕೊಳ್ಳುವಂತಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು.
ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಆಯಾಯ ಜಿಲ್ಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಆ ನಿಟ್ಟಿನಲ್ಲಿ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದಲ್ಲಿರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 80 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
‘ಜವಾಹರ್ ನವೋದಯ ವಿದ್ಯಾಲಯ 6 ನೇ ತರಗತಿ ಪ್ರವೇಶ ಪರೀಕ್ಷೆ ಎದುರಿಸುವದರಿಂದ, ಅಂಬೇಡ್ಕರ್, ಏಕಲವ್ಯ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಕನಕದಾಸ, ನಾರಾಯಣಗುರು ಹೀಗೆ ರಾಜ್ಯದ ಹಲವು ವಸತಿ ಶಾಲೆಗಳ ಪ್ರವೇಶಕ್ಕೂ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ಗ್ರಾಮೀಣ ಬಡ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು. ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವುದರಿಂದ ಭವಿಷ್ಯದಲ್ಲಿ ನೀಟ್, ಸಿಇಟಿ, ಜೆಇಇ ಹೀಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಒತ್ತಿ ಹೇಳಿದರು.’
ಜವಾಹರ್ ನವೋದಯ ವಿದ್ಯಾಲಯ 2023-24 ನೇ ಸಾಲಿಗೆ 6 ನೇ ತರಗತಿ ಪ್ರವೇಶ ಪರೀಕ್ಷೆಯು ಏಪ್ರಿಲ್, 29 ರಂದು ನಡೆಯಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದಂತೆ ಮೀಸಲಾತಿ ಇದೆ. ಕನಿಷ್ಠ 1/3 ಸ್ಥಾನಗಳು ಬಾಲಕಿಯರಿಗೆ ಮೀಸಲಾಗಿದೆ. ಕನಿಷ್ಠ 75 ಸ್ಥಾನಗಳನ್ನು ಆಯಾಯ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ನವೋದಯ ವಿದ್ಯಾಲಯದಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳು, ಊಟ ಮತ್ತು ವಸತಿ ಸೌಲಭ್ಯ, ವಲಸೆ ನೀತಿಯ ಮುಖಾಂತರ ವಿಶಾಲ ಸಾಂಸ್ಕøತಿಕ ವಿನಿಮಯ, ಕ್ರೀಡೆ ಮತ್ತು ಆಟೋಟಗಳಿಗೆ ಉತ್ತೇಜನ, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‍ಎಸ್‍ಎಸ್ ಹೀಗೆ ಹಲವು ಸೌಲಭ್ಯ ಒಳಗೊಂಡಿದೆ ಎಂದು ಡಾ.ಬಿ.ಸಿ.ಸತೀಶ ಅವರು ವಿವರಿಸಿದರು.
ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ಮಾಹಿತಿ ನೀಡಿ ನವೋದಯ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಜೆಇಇ ವಿಭಾಗದಲ್ಲಿ ಶೇ.56.6 ರಷ್ಟು, ನೀಟ್ ಪರೀಕ್ಷೆಯಲ್ಲಿ ಶೇ.78 ರಷ್ಟು ಸಾಧನೆ ಮಾಡಿದ್ದಾರೆ ಎಂದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು, 3 ಮತ್ತು 4 ನೇ ತರಗತಿಯಲ್ಲಿ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಓದಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಹಾಗೂ 2011 ರ ಮೇ, 1 ರಿಂದ 2013 ರ ಏಪ್ರಿಲ್, 30, 2013 ರೊಳಗೆ ಜನಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು.
ಅರ್ಜಿದಾರರು ಕೊಡಗು ಜಿಲ್ಲೆಯವರಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು ಎಂದು ಪ್ರಾಂಶುಪಾಲರು ಹೇಳಿದರು.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ವಿದ್ಯಾರ್ಥಿ ಆಧಾರ್ ಕಾರ್ಡ್‍ಗೆ ಪೋನ್ ನಂಬರ್ ಲಿಂಕ್ ಆಗಿರಬೇಕು. ತಹಶೀಲ್ದಾರ್‍ರಿಂದ ವಾಸಸ್ಥಳ ದೃಢೀಕರಣ ಪತ್ರ ಪಡೆದಿರಬೇಕು. ವಿದ್ಯಾರ್ಥಿಯ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿ ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ಲಿಂಗ ಮತ್ತು ವಾಸಸ್ಥಳವು ಶಾಲಾ ರಿಜಿಸ್ಟ್ರನಲ್ಲಿರುವಂತೆ ನಮೂದಿಸಬೇಕು. ತಾಳೆಯಾಗದಿದ್ದಲ್ಲಿ ಆಧಾರ್ ಕಾರ್ಡ್‍ನ್ನು ಸರಿಪಡಿಸಿಕೊಳ್ಳಬೇಕು. ಆಧಾರ್ ಕಾರ್ಡ್‍ನಲ್ಲಿರುವ ಮಾಹಿತಿಯು ಶಾಲಾ ರಿಜಿಸ್ಟ್ರರ್‍ಗೆ ಹೊಂದಾಣಿಕೆಯಾಗದಲ್ಲಿ ಆಧಾರ್ ಕಾರ್ಡ್‍ನ್ನು ಸರಿಪಡಿಸಿಕೊಳ್ಳಬೇಕು. ವಿದ್ಯಾರ್ಥಿಯು ಪರೀಕ್ಷೆಯನ್ನು ಯಾವ ಭಾಷೆಯಲ್ಲಿ ಬರೆಯುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪ್ರಾಂಶುಪಾಲರು ತಿಳಿಸಿದರು.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://navodaya.gov.in ಅಥವಾ cbseitms.rcil.gov.in/nvs ಹಾಗೂ ಜವಾಹರ್ ನವೋದಯ ವಿದ್ಯಾಲಯದ ಕಚೇರಿ ಅಧೀಕ್ಷಕರಾದ ಕೆ.ರವಿ(9663883213), ದೈಹಿಕ ಶಿಕ್ಷಣ ಶಿಕ್ಷಕರಾದ ಅರುಣ್ ಕುಮಾರ್ (9901423273), ಜೆಎಸ್‍ಎ ಜನನಿ ಸಿ.ಆರ್.(7760898148) ನ್ನು ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎನ್.ಮಂಜುನಾಥ್, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ದಿವಾಕರ ಇದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*