ಮಡಿಕೇರಿ ಜ.7 : ಚೆಟ್ಟಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಈರಳೆವಳಮುಡಿ ಶಾಖೆಯ ವಾಯುಪುತ್ರ ಭವನ ಜ.15 ರಂದು ಉದ್ಘಾಟನೆಗೊಳ್ಳಲಿದೆ.
ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯವ ಉದ್ಘಾಟನಾ ಸಮಾರಂಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯ ಜೀವ ವ್ಯೆವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಸಹಕಾರ ಸಂಘದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಶಿಥಿಲಾವಸ್ಥೆಗೊಂಡಿದ್ದ ಈರಳೆವಳಮುಡಿ ಶಾಖೆಯ ಹಳೆಯ ಕಟ್ಟಡವನ್ನು ಅಭಿವೃದ್ಧಿ ಪಡಿಸಲಾಗಿದ್ದು, ವಾಯುಪುತ್ರ ಭವನ ಎಂದು ಹೆಸರಿಡಲಾಗಿದೆ. ಇದಕ್ಕೆ ಪೂರಕವಾಗಿ ಕಟ್ಟಡದಲ್ಲಿ ಶ್ರೀಆಂಜನೇಯ ಸ್ವಾಮಿಯ ಪಂಚಮುಖದ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕಾರ್ಕಳದ ಗುಣೇಶ್ವರ ಶಿಲ್ಪಿಗಳು ಪಂಚಮುಖಿ ಆಂಜನೇಯನ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ.













