ಕುಶಾಲನಗರ, ಜ.7: ಬಿಜೆಪಿ ಪಕ್ಷದ ಬೂತ್ ವಿಜಯ ಅಭಿಯಾನ ಸೋಮವಾರಪೇಟೆ ಮಂಡಲ ಗುಡ್ಡೆಹೊಸೂರು ಶಕ್ತಿ ಕೇಂದ್ರದ ಅತ್ತೂರಿನ ಬೂತ್‍ಸಂಖ್ಯೆ 178 ರಲ್ಲಿ ನಡೆಯಿತು.
ಬೂತ್ ಅಧ್ಯಕ್ಷ ಜಯಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಭಿಯಾನವನ್ನು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಕಾರ್ಯಕರ್ತರು ನಿರಂತರ ಶ್ರಮವಹಿಸಬೇಕು ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷರಾಬಿನ್ ದೇವಯ್ಯ ಮಾತನಾಡಿ, ಬೂತ್ ವಿಜಯ ಅಭಿಯಾನದ ಉದ್ದೇಶದ ಬಗ್ಗೆ ಮಾಹಿತಿ ಒದಗಿಸಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಪ್ರಾಸ್ತಾವಿಕ ನುಡಿಗಳಾಡಿದರು.
ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿದರು.
ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿ.ಕೆ.ಲೋಕೇಶ್, ಕಾರ್ಯದರ್ಶಿ ಪುಷ್ಪಾ ನಾಗೇಶ್, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್‍ಕುಂದರ್, ಮಂಡಲ ಒಬಿಸಿ ಮೋರ್ಚಾ ಖಜಾಂಚಿ ಅಭಿಷೇಕ್ , ಶಕ್ತಿ ಕೇಂದ್ರದ ಪ್ರಮುಖರಾದ ಪ್ರವೀಣ್ ಕುಶಾಲಪ್ಪ, ನಿತ್ಯಾನಂದ ಹಾಗೂ ಗುಡ್ಡೆಹೊಸೂರು ಪಂಚಾಯತಿ ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆ ಯಶೋಧ, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷೆ ಇಂದಿರಾ ರಮೇಶ್ ಹಾಗೂ ಸದಸ್ಯರು ಮತ್ತು ಕಾರ್ಯಕರ್ತರು ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*