ಕುಶಾಲನಗರ, ಜ.7: ಜಲಮೂಲಗಳು ಕಲುಷಿತಗೊಳ್ಳದಂತೆ ಪ್ರತಿಯೊಬ್ಬರೂ ಜಾಗೃತಿ ವಹಿಸುವ ಮೂಲಕ ಸ್ವಚ್ಚ ಕಾವೇರಿ ಕನಸು ನನಸಾಗಲು ಸಾಧ್ಯ ಎಂದು ಶ್ರೀ ಮುತ್ತಪ್ಪ ದೇವಾಲಯ ಸೇವಾ ಟ್ರಸ್ಟ್ ಉಪಾಧ್ಯಕ್ಷ ಆರ್.ಚಂದ್ರ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಶ್ರೀ ಮುತ್ತಪ್ಪ ದೇವಾಲಯ ಟ್ರಸ್ಟ್ ಸಹಯೋಗದೊಂದಿಗೆ ನಡೆದ 140ನೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅವೈಜ್ಞಾನಿಕ ಅಭಿವೃದ್ಧಿ ನಡುವೆ ನದಿ ನೀರು ತನ್ನ ಗುಣಮಟ್ಟ ಕಳೆದುಕೊಳ್ಳುತ್ತಿದ್ದು, ನೇರವಾಗಿ ಬಳಕೆ ಮಾಡಲು ಸಾಧ್ಯವಾಗದಿರುವುದುಆತಂಕಕಾರಿ ಬೆಳವಣಿಗೆಯಾಗಿದೆ ಎಂದ ಅವರು, ಆರತಿ ಬಳಗದ ಮೂಲಕ ಸ್ವಚ್ಚ ಕಾವೇರಿಗಾಗಿ ನಡೆಯುತ್ತಿರುವ ನಿರಂತರ ಕಾರ್ಯಕ್ರಮದ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಉಪಸ್ಥಿತರಿದ್ದ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಹೆಚ್.ಎನ್ ಮುರುಳಿಧರ್ ಅವರು, ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಸಂಘಟನೆಗಳು ಸ್ವಚ್ಚಕಾವೇರಿ ಹೋರಾಟಕ್ಕೆ ಕೈಜೋಡಿಸಬೇಕು ಎಂದರು.
ತಮ್ಮ ಸಂಘಟನೆ ಮುಂದಿನ ದಿನಗಳಲ್ಲಿ ಬಳಗದ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.
ಅರ್ಚಕರಾದ ಕೃಷ್ಣಮೂರ್ತಿ ಭಟ್ ನೇತೃತ್ವದಲ್ಲಿ ಅರ್ಚನೆ ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಮಹಾ ಆರತಿ ಬೆಳಗಲಾಯಿತು.
ಈ ಸಂದರ್ಭ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಮುತ್ತಪ್ಪ ದೇವಾಲಯದ ಟ್ರಸ್ಟ್ ಉಪಾಧ್ಯಕ್ಷರಾದ ರಾಜೇಶ್, ಕಾರ್ಯದರ್ಶಿ ಪವನ್, ಮಂಜುನಾಥ್ ಮತ್ತು ಬಳಗದ ಸದಸ್ಯರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*