ಮಡಿಕೇರಿ ಜ.7 : ಸರ್ಕಾರ ಕ್ರಷರ್ ಮತ್ತು ಕಲ್ಲುಕೋರೆ ಮಾಲೀಕರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆ ಶನಿವಾರದಿಂದ ಜಿಲ್ಲೆಯ ಎಲ್ಲಾ ಕ್ವಾರಿ ಮತ್ತು ಕ್ರಷರ್‌ಗಳು ಚಾಲನೆಯಲ್ಲಿರುತ್ತದೆ ಎಂದು ಕೊಡಗು ಜಿಲ್ಲಾ ಕ್ವಾರಿ ಅಂಡ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ವಿ.ಎಮ್.ವಿಜಯ್ ಹಾಗೂ ಕಾರ್ಯದರ್ಶಿ ಬಿ.ಕೆ. ರಮೇಶ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ವಾರಿ ಮತ್ತು ಕ್ರಷರ್ ಮಾಲೀಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಟೇಟ್ ಫೆಡರೇಷನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಅಸೋಸಿಯೇಷನ್ ವತಿಯಿಂದ ರಾಜ್ಯದಲ್ಲಿರುವ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳಲ್ಲಿ ಯಾವುದೇ ಪ್ರೊಡಕ್ಷನ್ ಮತ್ತು ಸೇಲ್ಸ್ ಮಾಡದಂತೆ ಬಂದ್ ಮಾಡಿ ಮುಷ್ಕರ ನಡೆಸಲಾಗಿದ್ದು, ಅದರಂತೆ ಕೊಡಗಿನ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳನ್ನು ಸುಮಾರು 17 ದಿನಗಳವರೆಗೆ ಬಂದ್ ಮಾಡಿ ಮುಷ್ಕರ ನಡೆಸಲಾಗಿತ್ತು.
ಆದರೆ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿರುವ ಹಿನ್ನೆಲೆ ಇಂದಿನಿAದ ಜಿಲ್ಲೆಯ ಎಲ್ಲಾ ಕ್ವಾರಿ ಮತ್ತು ಕ್ರಷರ್ ಗಳು ಚಾಲನೆಯಲ್ಲಿರಲಿದ್ದು, ಮುಷ್ಕರಕ್ಕೆ ಬೆಂಬಲ ಸೂಚಿಸಿ ನಮ್ಮ ಜೊತೆಯಲ್ಲಿ ಇದ್ದಂತಹ ಕೊಡಗು ಜಿಲ್ಲಾ ಲಾರಿ ಮಾಲೀಕರ ಮತ್ತು ಚಾಲಕರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ, ಸದಸ್ಯರಿಗೆ ಹಾಗೂ ಲಾರಿ ಮಾಲೀಕರು ಮತ್ತು ಚಾಲಕರಿಗೆ ಕೊಡಗು ಜಿಲ್ಲಾ ಕ್ವಾರಿ ಮತ್ತು ಕ್ರಷರ್ ಮಾಲೀಕರ ಸಂಘದ ಪರವಾಗಿ ಧನ್ಯವಾದವನ್ನು ಅರ್ಪಿಸಿದರು.













