ಮಡಿಕೇರಿ ಜ.7 : ಆರೋಗ್ಯ ಇಲಾಖೆಯ ನೌಕರನೊಬ್ಬ ಶಾಲಾ ವಿದ್ಯಾರ್ಥಿಗಳಿಗೆ ಮತಪ್ರಚಾರದ ಪುಸ್ತಕಗಳನ್ನು ಹಂಚಿ ಮತಾಂತರ ಯತ್ನ ಮಾಡುತ್ತಿದ್ದ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ನೀಡಿದ ದೂರಿನನ್ವಯ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂ ಜಾಗರಣಾ ವೇದಿಕೆಯ ಪ್ರಮುಖ ಟಿ.ಎ.ಕುಮಾರ್ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ನಿಶಾಂತ್ ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು.
ಈತನ ಬಳಿ ಕ್ರೈಸ್ತ ಮತಕ್ಕೆ ಸಂಬಂಧಿಸಿದ ಪುಸ್ತಕಗಳು ದೊರಕಿವೆ. ನಗರದ ಹೃದಯ ಭಾಗದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಹಂಚುತ್ತಿದ್ದ ಸಂದರ್ಭ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಹೇಳಲಾಗಿದೆ.















