ಸುಂಟಿಕೊಪ್ಪ,ಜ.9 : ಕೊಡಗರಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಮಾಹಿತಿ ಹಾಗೂ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಬಿ.ಎಸ್.ಶಿಲಾ ರೈ ಮಾತನಾಡಿ, ಗರ್ಭಿಣಿಯರು ಟಿ.ಡಿ.ಚುಚ್ಚುಮದ್ದು ತೆಗೆದುಕೊಳ್ಳಬೇಕು. 0.ಯಿಂದ 1 ವರ್ಷ ಮಗುವಿಗೆ ಬಿಸಿಜಿ ಯಿಂದ ಎಂ.ಆರ್. 2 ಮದ್ದು ಗಳನ್ನು ನೀಡಬೇಕು. ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಒಂದು ಅಂತರವಿರಬೇಕು ಎಂದು ಹೇಳಿದರು.
ಆರೋಗ್ಯ ಕಾರ್ಯಕರ್ತೆ, ಕಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆ ಕೆ.ಸಿ.ಲತಾ, ಆಶಾ, ಕಾರ್ಯರ್ತೆ ಜ್ಯೋತಿ ಭಾಸ್ಕರ ದಿನದ ಮಹತ್ವದ ಕುರಿತು ಮಾತನಾಡಿದರು.
ಕೊಡಗರಹಳ್ಳಿ ಗ್ರಾ.ಪಂ.ಸದಸ್ಯ ಚೆನ್ನಬಸವಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಆರೋಗ್ಯವಂತ ಮಕ್ಕಳನ್ನು ಗುರುತಿಸಿ ಬಹುಮಾನವನ್ನು ವಿತರಿಸಿದರು.
ಸಮುದಾಯ ಆರೋಗ್ಯ ಅಧಿಕಾರಿ ಟೆಸ್ನಿ ಥೋಮಸ್, ಆಶಾ ಕಾರ್ಯಕರ್ತರಾದ ಕವಿತಾ, ಗೀತ, ಅಂಗನವಾಡಿ ಸಹಾಯಕಿ ಸಂಧ್ಯಾ, ಕೊಡಗರಹಳ್ಳಿ ಸರಕಾರಿ ಮಾದರಿ ಪ್ರಾಥಮಿ ಶಾಲೆಯ ಮುಖ್ಯೋಪಾದ್ಯಾಯನಿ ಭಾಗೀರಥಿ, ಉಪ್ಪುತೋಡು ಅಂಗನವಾಡಿ ಕಾರ್ಯಕರ್ತೆ ಮಹದೇವಮ್ಮ ಸ್ವಾಗತಿಸಿ, ಕೊಡಗರಹಳ್ಳಿ ಅಂಗನವಾಡಿ ಕಾರ್ಯಕರ್ತೆ ಎಸ್.ಎನ್.ಸಾವಿತ್ರಿ ನಿರೂಪಿಸಿ, ವಂದಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*