ಸುಂಟಿಕೊಪ್ಪ,ಜ.9 : ಕಾಜೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಜ್ಯೋತಿ ಪ್ರಯುಕ್ತ ಏ.14 ರಂದು ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ.
ಜ.14 ರಂದು ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮ ಮತ್ತು ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ.
ಸಂಜೆ 6 ಗಂಟೆಯಿಂದ ದೇವಾಲಯದಲ್ಲಿ ದೀಪ ಬೆಳಗಿಸಿ ನಂತರ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಭಕ್ತಾಧಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ ಎಂದು ಅಯ್ಯಪ್ಪ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.













