ಮಡಿಕೇರಿ ಜ.9 : ಮಡಿಕೇರಿ ನಗರದ ಕೊಹಿನೂರು ರಸ್ತೆಯ ಬದಿಯಲ್ಲಿ ಬಾಡಿಗೆ ಲಾರಿಗಳನ್ನು ನಿಲ್ಲಿಸುತ್ತಿರುವುದರಿಂದ ಸಮೀಪದ ವ್ಯಾಪಾರಿಗಳಿಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಲಾರಿಗಳ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಸೂಚಿಸಬೇಕೆಂದು ಒತ್ತಾಯಿಸಿ ಸ್ಥಳೀಯ ವರ್ತಕರು ಹಾಗೂ ಹೊಟೇಲ್ ಉದ್ಯಮಿಗಳು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.
ಜನನಿಬಿಡ ಪ್ರದೇಶವಾಗಿರುವ ಕೊಹಿನೂರು ರಸ್ತೆಯಲ್ಲಿ ಲಾರಿಗಳನ್ನು ನಿಲುಗಡೆಗೊಳಿಸುತ್ತಿರುವುದರಿಂದ ಇಲ್ಲಿನ ವಾಣಿಜ್ಯ ಮಳಿಗೆ, ಅಂಗಡಿ, ಹೊಟೇಲ್ ವ್ಯಾಪಾರಕ್ಕೆ ಅಡಚಣೆಯಾಗುತ್ತಿದೆ. ಪ್ರವಾಸಿಗರು ವಾಹನ ನಿಲುಗಡೆಗೆ ಹರಸಾಹಸ ಪಡುತ್ತಿದ್ದಾರೆ. ಅಲ್ಲದೆ ಇಲ್ಲಿ ಸಾರ್ವಜನಿಕ ಶೌಚಾಲಯವೂ ಇದ್ದು, ಇದನ್ನು ಬಳಸಲು ಸಾರ್ವಜನಿಕರಿಗೆ ಅಡಚಣೆಯಾಗುತ್ತಿದೆ.
ನಗರಸಭೆಯಿಂದ ಬಾಡಿಗೆ ವಾಹನಗಳ ನಿಲುಗಡೆಗೆ ನೂತನ ಖಾಸಗಿ ಬಸ್ ನಿಲ್ದಾಣದ ಸಮೀಪ ಸ್ಥಳ ಸೂಚಿಸಿ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಬಾಡಿಗೆ ಲಾರಿಗಳನ್ನು ಇಲ್ಲಿ ನಿಲುಗಡೆಗೊಳಿಸಲು ಸೂಚನೆ ನೀಡಬೇಕೆಂದು ವರ್ತಕರು ಮನವಿಯಲ್ಲಿ ತಿಳಿಸಿದ್ದಾರೆ.
ಲಾರಿ ಮಾಲೀಕರು ಮತ್ತು ಚಾಲಕರ ಸಂಘ ಕೂಡ ಸಾರ್ವಜನಿಕರು ಹಾಗೂ ವರ್ತಕರ ಮನವಿಗೆ ಸ್ಪಂದಿಸಿ ನಿಲ್ದಾಣವನ್ನು ಸ್ಥಳಾಂತರಗೊಳಿಸಿ ಸಹಕರಿಸಬೇಕೆಂದು ವರ್ತಕರು ಕೋರಿಕೊಂಡಿದ್ದಾರೆ.
ಲಾರಿ ನಿಲ್ದಾಣವನ್ನು ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸ್ಥಳೀಯ ಶಾಸಕರು ಹಾಗೂ ನಗರಸಭೆಯ ಆಡಳಿತ ಮಂಡಳಿ ಪ್ರವಾಸೋದ್ಯಮವನ್ನೇ ನಂಬಿ ಜೀವನ ಸಾಗಿಸುತ್ತಿರುವವರಿಗೆ ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಸ್ಥಳೀಯ ವರ್ತಕರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಲಾಗಿದೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*