ಮಡಿಕೇರಿ ಜ.9 : ಕೊಡಗು ಜಿಲ್ಲೆಯಲ್ಲಿರುವ ದೈವ ಆರಾಧಕರು ಹಾಗೂ ದೈವ ನರ್ತಕರ ಸಭೆ ಜ.13 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಪಿ.ಎಂ.ರವಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ತುಳುನಾಡಿನ ದೈವಾರಾಧನೆಯ ಬಹಳಷ್ಟು ದೈವ ಕ್ಷೇತ್ರಗಳಿವೆ. ದೈವ ಆರಾಧಕರು ಹಾಗೂ ದೈವ ನರ್ತಕರು ಕೂಡ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ದೈವ ಮತ್ತು ದೈವಾರಾಧನೆಯನ್ನು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅವಮಾನಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು.
ಅಲ್ಲದೆ ಜಿಲ್ಲೆಯಲ್ಲಿರುವ ತುಳುನಾಡಿನ ದೈವ ಕ್ಷೇತ್ರಗಳ ಇತಿಹಾಸವನ್ನು ದಾಖಲೀಕರಣ ಮಾಡಿ ಪುಸ್ತಕದ ರೂಪದಲ್ಲಿ ಹೊರ ತರುವುದು, ದೈವಕೋಲ ಮತ್ತು ನೇಮೋತ್ಸವವನ್ನು ಕ್ರಮಬದ್ಧವಾಗಿ ನಡೆಸುವುದು, ದೈವಾರಾಧಕರು ಹಾಗೂ ದೈವ ನರ್ತಕರಿಗೆ ಸರಕಾರ ಘೋಷಿಸಿರುವ ಮಾಸಾಶನದ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡುವುದು, ದೈವಕ್ಷೇತ್ರಗಳ ಅಭಿವೃದ್ಧಿ ಕುರಿತು ಸರಕಾರಕ್ಕೆ ಮಾಹಿತಿ ಮತ್ತು ಮನವಿ ನೀಡುವುದು, ದೈವಾರಾಧಕರು ಹಾಗೂ ದೈವ ನರ್ತಕರ ಸಂಘ ರಚಿಸುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದು ರವಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುಮಾರು 45ಕ್ಕೂ ಹೆಚ್ಚು ತುಳುನಾಡಿನ ದೈವಸ್ಥಾನಗಳಿದ್ದು, ಎಲ್ಲಾ ದೈವಸ್ಥಾನಗಳ ಆರಾಧಕರು ಹಾಗೂ ನರ್ತಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ 99720 73295 ಸಂಪರ್ಕಿಸಬಹುದಾಗಿದೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*