ಮಡಿಕೇರಿ ಜ.9 : ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ತ್ರೈಮಾಸಿಕ ಸಭೆ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂಡಳಿ ಕಚೇರಿ ವನವಿಕಾಸ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣ ಸಂಬಂಧ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪ್ರಗತಿ ಬಗ್ಗೆ ಅಧ್ಯಕ್ಷರು ಮಾಹಿತಿ ಪಡೆದುಕೊಂಡರು. ಆರ್ಥಿಕ ವರಾಂತ್ಯದವರೆಗೆ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮುಂದಿನ ಆರ್ಥಿಕ ವರ್ಷದಲ್ಲಿ ಹೆಚ್ಚಿನ ಅನುದಾನಕ್ಕಾಗಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿ, ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಮಂಡಳಿ ಸದಸ್ಯರು ಸಲಹೆ ನೀಡಿದರು.
ಸನ್ಮಾನ : ಸಭೆ ಆರಂಭಕ್ಕೂ ಮುನ್ನ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರಾಧಾದೇವಿ ಅವರನ್ನು ಸನ್ಮಾನಿಸಲಾಯಿತು. ಮಂಡಳಿಯ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡಿದಕ್ಕಾಗಿ ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತ ಎಸ್.ಅರೆಕಲ್, ಸದಸ್ಯರಾದ ಉತ್ತರ ಕನ್ನಡದ ಪ್ರಕಾಶ್ ಮೇಸ್ತಾ, ಶಿವಮೊಗ್ಗ ವೆಂಕಟೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿಜಯ್ ಮೋಹನ್ ರಾಜ್, ಅರಣ್ಯ ಇಲಾಖೆ ಪಿಸಿಸಿಎಫ್ ಎ.ಕೆ. ಸಿಂಗ್ ಹಾಗೂ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*