ಕುಶಾಲನಗರ ಜ.10 : ಕೊಡವ ಸಂಸ್ಕೃತಿ ಆಚಾರ, ವಿಚಾರ, ಪದ್ಧತಿ ಮತ್ತು ಪರಂಪರೆಯನ್ನು ಆಚರಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಾಗಿದೆ ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು.
ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ಉದ್ಘಾಟಿಸಿ ಮಾತನಾಡಿದ ಅವರು, ಯುವಪೀಳಿಗೆ ಆಧುನಿಕತೆಯಕಡೆಗೆ ಮಾರುಹೋಗಿ ಕೊಡವ ಮೂಲ ಸಂಸ್ಕೃತಿಯನ್ನು ಮರೆಯುವ ಪರಿಸ್ಥಿತಿ ಎದುರಾಗುತ್ತಿದೆ. ಯುವಜನಾಂಗಕ್ಕೆ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಿ ಮಾರ್ಗದರ್ಶನ ನೀಡುವಂತಾಗಬೇಕು. ಕೊಡವ ಸಂಸ್ಕೃತಿಯ ಮಹತ್ವವನ್ನು ತಿಳಿಸಿ, ಉಳಿಸಿ ಬೆಳೆಸಲು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಉದ್ಯಮಿಚೇಂದಂಡಜೆಮ್ಸಿ ಪೊನ್ನಪ್ಪ ಮಾತನಾಡಿ, ಕುಶಾಲನಗರಕೊಡವ ಸಮಾಜದಲ್ಲಿ ಸದಸ್ಯರ ಸಂಖ್ಯೆಏರಿಕೆಯಾಗಿದ್ದು, ಸಮುದಾಯದ ಕಾರ್ಯಕ್ರಮಗಳಿಗೆ ಪ್ರತ್ಯೇಕಕಟ್ಟಡದಅವಶ್ಯಕತೆಇದೆ ಈ ಹಿನ್ನಲೆಯಲ್ಲಿ ವಿಶಾಲವಾದಜಾಗ ಖರೀದಿಸಿ ಅತ್ಯಾಧುನಿಕಕಟ್ಟಡ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು. ಹಿರಿಯರುಕಿರಿಯರಿಗೆ ಸಂಸ್ಕೃತಿ ಹೇಳಿಕೊಡುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಲು ಪ್ರಯತ್ನಿಸಬೇಕುಎಂದರು.
ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ಮಾತನಾಡಿ, ಕೊಡವ ಸಮಾಜದ ಮೂಲಕ ನಿರಂತರವಾಗಿ ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಸಮುದಾಯದ ಏಳಿಗೆಗಾಗಿ ಕಾರ್ಯಕ್ರಮಗಳ ಮೂಲಕ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಒತ್ತೊರ್ಮೆ ಕೂಟದ ಅಂಗವಾಗಿ ಕೊಡವ ಸಮಾಜದಲ್ಲಿ ಕೋಲಾಟ, ಪರೆಯಕಳಿ, ಉಮ್ಮತಾಟ್, ಮಕ್ಕಳ ನೃತ್ಯ ಮತ್ತಿತರ ಕಾರ್ಯಕ್ರಮಗಳು ನಡೆದವು. 2021 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಮೇಲ್ಪಟ್ಟ ತರಗತಿಗಳಲ್ಲಿ ಹೆಚ್ಚಿನ ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಸಮಾಜದ ಉಪಾಧ್ಯಕ್ಷ ಪುಲಿಯಂಡ ಚಂಗಪ್ಪ, ಕಾರ್ಯದರ್ಶಿ ವಾಂಚೀರ ನಂಜುಂಡ, ಖಜಾಂಚಿ ಬಲ್ಯಾಟಂಡ ಚಿಂಗಪ್ಪ, ಜಂಟಿ ಕಾರ್ಯದರ್ಶಿ ಕೇಕಡ ಸೋಮಣ್ಣ, ಆಡಳಿತ ಮಂಡಳಿ ಸದಸ್ಯರು ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*